
ಧಾರವಾಡ, 23 ಆಗಸ್ಟ್ (ಹಿ.ಸ.):
ಆ್ಯಂಕರ್:
2026ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ಸಾಲ ಪಡೆದ ರೈತರಿಗೆ ನೋಂದಣಿ ಮಾಡಿಕೊಳ್ಳಲು ಆಗಸ್ಟ್ 31ರವರೆಗೆ ಅವಧಿ ವಿಸ್ತರಿಸಲಾಗಿದೆ.
ಕೆಂಪು ಮೆಣಸಿನಕಾಯಿ (ಮಳೆ ಆಶ್ರಿತ) ಹಾಗೂ ಕೆಂಪು ಮೆಣಸಿನಕಾಯಿ (ನೀರಾವರಿ) ಬೆಳೆಗಳಿಗೆ ವಿಮಾ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಈ ಅವಕಾಶ ಕಲ್ಪಿಸಲಾಗಿದೆ.
ಈ ಅವಧಿ ವಿಸ್ತರಣೆಯು ಬೆಳೆ ಸಾಲ ಪಡೆದ ರೈತರಿಗೆ ಮಾತ್ರ ಅನ್ವಯವಾಗಲಿದೆ ಎಂದು ಧಾರವಾಡ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.