ತಕ್ಷಣ ಬರಗಾಲ ಘೋಷಿಸಿ ರೈತರಿಗೆ ಪರಿಹಾರ ನೀಡಿ: ಬಸವರಾಜ ಬೊಮ್ಮಾಯಿ
ಹಾವೇರಿ, 23 ಆಗಸ್ಟ್ (ಹಿ.ಸ.): ಆ್ಯಂಕರ್: ರಾಜ್ಯದಲ್ಲಿ ಈ ಬಾರಿ ಸಮರ್ಪಕ ಮಳೆಯಾಗದೆ ಬರದ ಛಾಯೆ ಆವರಿಸಿದೆ. ಸರ್ಕಾರ ಕೂಡಲೇ ಬರಗಾಲ ಘೋಷಿಸಿ ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಒತ್ತಾಯಿಸಿದರು. ಸವಣೂರು ತಾಲೂಕಿನ ಹುರುಳಿಕುಪ
ಬೊಮ್ಮಾಯಿ


ಹಾವೇರಿ, 23 ಆಗಸ್ಟ್ (ಹಿ.ಸ.):

ಆ್ಯಂಕರ್:

ರಾಜ್ಯದಲ್ಲಿ ಈ ಬಾರಿ ಸಮರ್ಪಕ ಮಳೆಯಾಗದೆ ಬರದ ಛಾಯೆ ಆವರಿಸಿದೆ. ಸರ್ಕಾರ ಕೂಡಲೇ ಬರಗಾಲ ಘೋಷಿಸಿ ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಒತ್ತಾಯಿಸಿದರು.

ಸವಣೂರು ತಾಲೂಕಿನ ಹುರುಳಿಕುಪ್ಪಿ ಗ್ರಾಮದಲ್ಲಿ ಭಾರತ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನ ನೂತನ ಪೆಟ್ರೋಲ್ ಬಂಕ್ ಉದ್ಘಾಟಿಸಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಕೃಷಿ ಆಧಾರಿತ ಆರ್ಥಿಕ ವ್ಯವಸ್ಥೆಯಲ್ಲಿ ರೈತರು ಆರ್ಥಿಕವಾಗಿ ಸದೃಢರಾದರೆ ಮಾತ್ರ ಗ್ರಾಮೀಣ ಸಮಾಜ ಹಾಗೂ ಮಾರುಕಟ್ಟೆ ಚೇತರಿಸಿಕೊಳ್ಳಲು ಸಾಧ್ಯ ಎಂದರು.

ರಾಜ್ಯ ಸರ್ಕಾರ ಕೇಂದ್ರದ ನೆರವಿಗಾಗಿ ಕಾಯದೆ, ತನ್ನ ಬೊಕ್ಕಸದಿಂದಲೇ ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣ ನೇರ ನೆರವು ಹಾಗೂ ಪರಿಹಾರ ಧನ ಬಿಡುಗಡೆ ಮಾಡಬೇಕು. ಗ್ರಾಮಗಳಲ್ಲಿ ಉತ್ತಮ ಬೆಳೆ ಬಂದಾಗ ಮಾತ್ರ ಸವಣೂರು ಸೇರಿದಂತೆ ಸುತ್ತಮುತ್ತಲಿನ ಮಾರುಕಟ್ಟೆಗಳಲ್ಲಿ ವ್ಯಾಪಾರ-ವಹಿವಾಟು ಸುಗಮವಾಗಿ ನಡೆಯಲಿದೆ. ಗ್ರಾಮೀಣ ಆರ್ಥಿಕತೆಯ ಚೇತರಿಕೆಗೆ ಮೂಲಾಧಾರ ಎಂದು ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande