ಕೆಪಿಎಸ್ಸಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿವಾಸದ ಮೇಲೆ ಇಡಿ ದಾಳಿ
ಕೆಪಿಎಸ್ಸಿ ಹಗರಣದ ತನಿಖೆ ತೀವ್ರ
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ ಸಂಗ್ರಹ ಚಿತ್ರ


ಬೆಂಗಳೂರು, 23 ಆಗಸ್ಟ್ (ಹಿ.ಸ.)

ಆ್ಯಂಕರ್:

ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಕೆಪಿಎಸ್ಸಿ ಹಗರಣದ ತನಿಖೆಯನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ತೀವ್ರಗೊಳಿಸಿದ್ದು, 2016ರ ಬ್ಯಾಚ್‌ನ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರಿಗೆ ಸೇರಿದ ನಿವಾಸದ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ.

ಮೂರು ಕಾರುಗಳಲ್ಲಿ ಆಗಮಿಸಿದ ಇಡಿ ಅಧಿಕಾರಿಗಳ ತಂಡ ಶೋಧ ಕಾರ್ಯಾಚರಣೆಗೆ ಮುಂದಾದಾಗ ನಿವಾಸಕ್ಕೆ ಬೀಗ ಹಾಕಿರುವುದು ಕಂಡುಬಂದಿದೆ. ಈ ವೇಳೆ ಅಧಿಕಾರಿಗಳನ್ನು ಒಳಗೆ ಪ್ರವೇಶಿಸಲು ಭದ್ರತಾ ಸಿಬ್ಬಂದಿ ನಿರಾಕರಿಸಿದ ಹಿನ್ನೆಲೆಯಲ್ಲಿ ಸ್ಥಳೀಯ ಸಾಕ್ಷಿದಾರರೊಂದಿಗೆ ನಕಲಿ ಕೀಲಿ ಬಳಸಿ ಇಡಿ ಅಧಿಕಾರಿಗಳು ಮನೆ ಪ್ರವೇಶಿಸಿ ಶೋಧ ಕಾರ್ಯ ನಡೆಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande