ಶಿಕ್ಷಣದಿಂದಲೇ ಸುಭದ್ರ ಭವಿಷ್ಯದ ಬುನಾದಿ: ಡಿ.ಕೆ. ಶಿವಕುಮಾರ್
ಬೆಂಗಳೂರು, 23 ಆಗಸ್ಟ್ (ಹಿ.ಸ.): ಆ್ಯಂಕರ್:ಹಳ್ಳಿಗಳ ಪ್ರತಿಭೆಗಳು ವಿಶ್ವದ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕು ಹಾಗೂ ಅವರಿಗೆ ಅತ್ಯುನ್ನತ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬುದು ಸರ್ಕಾರದ ಅಚಲ ಸಂಕಲ್ಪ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ನೀಡಿರುವ
ಸಿಎಂ ಎಕ್ಸ್ ಪೋಸ್ಟ್


ಬೆಂಗಳೂರು, 23 ಆಗಸ್ಟ್ (ಹಿ.ಸ.):

ಆ್ಯಂಕರ್:ಹಳ್ಳಿಗಳ ಪ್ರತಿಭೆಗಳು ವಿಶ್ವದ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕು ಹಾಗೂ ಅವರಿಗೆ ಅತ್ಯುನ್ನತ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬುದು ಸರ್ಕಾರದ ಅಚಲ ಸಂಕಲ್ಪ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಅವರು, ಸರ್ಕಾರ ಕೇವಲ ಇಟ್ಟಿಗೆ-ಸಿಮೆಂಟ್‌ನ ಕಟ್ಟಡಗಳನ್ನು ನಿರ್ಮಿಸುತ್ತಿಲ್ಲ. ನಾಳಿನ ದೃಢ ಕರ್ನಾಟಕದ ಬುನಾದಿಯನ್ನು ನಿರ್ಮಿಸುತ್ತಿದೆ ಎಂದಿದ್ದಾರೆ.

₹2,500 ಕೋಟಿ ವೆಚ್ಚದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಸಮಗ್ರವಾಗಿ ಉನ್ನತೀಕರಿಸುವ ‘ಶಿಕ್ಷಣ ಕ್ರಾಂತಿ 2030’ ಯೋಜನೆಗೆ ಹೆಜ್ಜೆ ಇಡಲಾಗಿದೆ. ಎಲ್‌ಕೆಜಿಯಿಂದ 12ನೇ ತರಗತಿಯವರೆಗೆ ಆಧುನಿಕ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಶಿಕ್ಷಣವನ್ನು ಒಂದೇ ಸೂರಿನಡಿ ಉಚಿತವಾಗಿ ಒದಗಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.

ಇದು ಕೇವಲ ಶಾಲೆಗಳ ಅಭಿವೃದ್ಧಿಯಲ್ಲ; ಮುಂದಿನ 50 ವರ್ಷಗಳ ಕಾಲ ಕನ್ನಡಿಗರು ಜಗತ್ತಿನೆದುರು ತಲೆ ಎತ್ತಿ ನಿಲ್ಲುವಂತೆ ಮಾಡುವ ಮಹತ್ವದ ಪ್ರಯತ್ನವಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಜ್ಞಾನದ ಹಾದಿಯಲ್ಲಿ ಒಟ್ಟಾಗಿ ಸಾಗುವ ಮೂಲಕ ಭವ್ಯ ಭವಿಷ್ಯದತ್ತ ಹೆಜ್ಜೆ ಹಾಕಿ ಬಲಿಷ್ಠ ಕರ್ನಾಟಕ ನಿರ್ಮಿಸೋಣ ಎಂದು ಅವರು ಕರೆ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande