ನಾಗಮಂಗಲದಲ್ಲಿ ಅರಣ್ಯ ಇಲಾಖೆ ವಸತಿಗೃಹ ಉದ್ಘಾಟನೆ
ಮಂಡ್ಯ, 23 ಆಗಸ್ಟ್ (ಹಿ.ಸ.): ಆ್ಯಂಕರ್: ನಾಗಮಂಗಲ ಪಟ್ಟಣದಲ್ಲಿ ಅರಣ್ಯ ಇಲಾಖೆಯ ನೂತನ ವಸತಿಗೃಹವನ್ನು ಸಚಿವ ಎನ್. ಚಲುವರಾಯಸ್ವಾಮಿ ಇಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ರಾಜ್ಯದ ಅರಣ್ಯ ಹಾಗೂ ನೈಸರ್ಗಿಕ ಸಂಪತ್ತನ್ನು ಹಗಲಿರುಳು ಸಂರಕ್ಷಿಸುವ ಅರಣ್ಯ ಇಲಾಖೆ ಸಿಬ್ಬಂದಿಗೆ ಉತ್ತಮ
ಉದ್ಘಾಟನೆ


ಮಂಡ್ಯ, 23 ಆಗಸ್ಟ್ (ಹಿ.ಸ.):

ಆ್ಯಂಕರ್:

ನಾಗಮಂಗಲ ಪಟ್ಟಣದಲ್ಲಿ ಅರಣ್ಯ ಇಲಾಖೆಯ ನೂತನ ವಸತಿಗೃಹವನ್ನು ಸಚಿವ ಎನ್. ಚಲುವರಾಯಸ್ವಾಮಿ ಇಂದು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ರಾಜ್ಯದ ಅರಣ್ಯ ಹಾಗೂ ನೈಸರ್ಗಿಕ ಸಂಪತ್ತನ್ನು ಹಗಲಿರುಳು ಸಂರಕ್ಷಿಸುವ ಅರಣ್ಯ ಇಲಾಖೆ ಸಿಬ್ಬಂದಿಗೆ ಉತ್ತಮ ಮೂಲಸೌಕರ್ಯ ಮತ್ತು ಸೌಲಭ್ಯ ಕಲ್ಪಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದರು.

ನೂತನ ವಸತಿಗೃಹದಿಂದ ಅರಣ್ಯ ಇಲಾಖೆ ಸಿಬ್ಬಂದಿಯ ದೈನಂದಿನ ಜೀವನಕ್ಕೆ ಅನುಕೂಲವಾಗುವುದರ ಜೊತೆಗೆ, ಕರ್ತವ್ಯ ನಿರ್ವಹಣೆಗೆ ಮತ್ತಷ್ಟು ಉತ್ತೇಜನ ದೊರೆಯಲಿದೆ. ಅರಣ್ಯ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಸಿಬ್ಬಂದಿಯ ಸೇವೆ ಮಹತ್ವದ್ದಾಗಿದ್ದು, ಅವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande