ವಿಕಲಚೇತನ ಉದ್ಯೋಗಸ್ಥ ಮಹಿಳೆಯರು, ವಿದ್ಯಾರ್ಥಿನಿಯರಿಗಾಗಿ ವಸತಿ ನಿಲಯ
ಹುಬ್ಬಳ್ಳಿ, 23 ಆಗಸ್ಟ್ (ಹಿ.ಸ.): ಆ್ಯಂಕರ್: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅನುದಾನದಡಿ ವಿಕಲಚೇತನ ಉದ್ಯೋಗಸ್ಥ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರಿಗಾಗಿ ವಸತಿ ನಿಲಯವನ್ನು ಹುಬ್ಬಳ್ಳಿಯ ವಿದ್ಯಾನಗರದಲ್ಲಿ ಆರಂಭಿಸಲಾಗಿದೆ. ವಿಶ್ವಧರ್ಮ ಮಹಿಳಾ ಮತ್ತು ಮಕ್ಕಳ ಶಿಕ್ಷಣ ಸೇವಾಶ್ರಮ
ವಿಕಲಚೇತನ ಉದ್ಯೋಗಸ್ಥ ಮಹಿಳೆಯರು, ವಿದ್ಯಾರ್ಥಿನಿಯರಿಗಾಗಿ ವಸತಿ ನಿಲಯ


ಹುಬ್ಬಳ್ಳಿ, 23 ಆಗಸ್ಟ್ (ಹಿ.ಸ.):

ಆ್ಯಂಕರ್:

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅನುದಾನದಡಿ ವಿಕಲಚೇತನ ಉದ್ಯೋಗಸ್ಥ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರಿಗಾಗಿ ವಸತಿ ನಿಲಯವನ್ನು ಹುಬ್ಬಳ್ಳಿಯ ವಿದ್ಯಾನಗರದಲ್ಲಿ ಆರಂಭಿಸಲಾಗಿದೆ.

ವಿಶ್ವಧರ್ಮ ಮಹಿಳಾ ಮತ್ತು ಮಕ್ಕಳ ಶಿಕ್ಷಣ ಸೇವಾಶ್ರಮ ಸಮಿತಿ ವತಿಯಿಂದ ವಸತಿ ನಿಲಯವನ್ನು ನಿರ್ವಹಿಸಲಾಗುತ್ತಿದ್ದು, ಜಿಲ್ಲೆಯ ವಿಕಲಚೇತನ ಉದ್ಯೋಗಸ್ಥ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಗಂಗಾಧರ ಲಕ್ಕುಂಡಿ ಅವರನ್ನು 6364673577 ಅಥವಾ ಕಚೇರಿ ದೂರವಾಣಿ ಸಂಖ್ಯೆ 0836-2744474ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande