ವೇಗವಾಗಿ ಬೆಳೆಯುತ್ತಿರುವ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರ ಜಾಗತಿಕ ಹೂಡಿಕೆದಾರರ ಆಕರ್ಷಣೆಯ ಕೇಂದ್ರ: ಪ್ರಧಾನಿ ಮೋದಿ
ನವದೆಹಲಿ, 23 ಆಗಸ್ಟ್ (ಹಿ.ಸ.): ಆ್ಯಂಕರ್: ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಖಾಸಗಿ ಬಾಹ್ಯಾಕಾಶ ಕ್ಷೇತ್ರವು ಜಾಗತಿಕ ಹೂಡಿಕೆದಾರರ ಆಕರ್ಷಣೆಯ ಕೇಂದ್ರವಾಗಿ ರೂಪುಗೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಷ್ಟ್ರೀಯ ಬಾಹ್ಯಾಕಾಶ ದಿನದ ಅಂಗವಾಗಿ ದೇಶದ ಜನತೆಗೆ ಶುಭಾಶಯ ಕೋರಿ
प्रधानमंत्री नरेन्द्र मोदी।


ನವದೆಹಲಿ, 23 ಆಗಸ್ಟ್ (ಹಿ.ಸ.):

ಆ್ಯಂಕರ್:

ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಖಾಸಗಿ ಬಾಹ್ಯಾಕಾಶ ಕ್ಷೇತ್ರವು ಜಾಗತಿಕ ಹೂಡಿಕೆದಾರರ ಆಕರ್ಷಣೆಯ ಕೇಂದ್ರವಾಗಿ ರೂಪುಗೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ರಾಷ್ಟ್ರೀಯ ಬಾಹ್ಯಾಕಾಶ ದಿನದ ಅಂಗವಾಗಿ ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಜಾಗತಿಕ ಪ್ರಭಾವ ನಿರಂತರವಾಗಿ ಹೆಚ್ಚುತ್ತಿದೆ. ಖಾಸಗಿ ಬಾಹ್ಯಾಕಾಶ ಸಂಸ್ಥೆಗಳು ಹಾಗೂ ನವೋದ್ಯಮಗಳ ಹೆಚ್ಚುತ್ತಿರುವ ಪಾಲ್ಗೊಳ್ಳುವಿಕೆಯಿಂದ ಬಾಹ್ಯಾಕಾಶ ಪರಿಸರ ವ್ಯವಸ್ಥೆಗೆ ಹೊಸ ವೇಗ ದೊರೆತಿದೆ ಎಂದು ತಿಳಿಸಿದ್ದಾರೆ.

ಭಾರತವು 2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಸಂಕಲ್ಪ ಹೊಂದಿದ್ದು, ಈ ಗುರಿ ಸಾಧನೆಯಲ್ಲಿ ಬಾಹ್ಯಾಕಾಶ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ದೇಶದ ಹೆಚ್ಚುತ್ತಿರುವ ಸಾಮರ್ಥ್ಯವು ಭಾರತದ ಸಮಗ್ರ ಅಭಿವೃದ್ಧಿಯ ಪ್ರಮುಖ ಭಾಗವಾಗಿದೆ ಎಂದು ಮೋದಿ ಹೇಳಿದ್ದಾರೆ.

ಹೊಸ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುತ್ತಿರುವ ಯುವ ಪೀಳಿಗೆಯ ಸಾಧನೆಯನ್ನು ಶ್ಲಾಘಿಸಿದ ಅವರು, ಭಾರತೀಯ ಬಾಹ್ಯಾಕಾಶ ಕ್ಷೇತ್ರದ ಪ್ರತಿಭೆಗಳು ವಿಶ್ವದಾದ್ಯಂತ ತಮ್ಮದೇ ಆದ ಛಾಪು ಮೂಡಿಸುತ್ತಿವೆ ಎಂದರು. ಇಸ್ರೋದ ಯಶಸ್ಸು ಮುಂದಿನ ಪೀಳಿಗೆಯ ವಿಜ್ಞಾನಿಗಳಿಗೆ ಸ್ಫೂರ್ತಿಯಾಗಿದ್ದು, ಮಕ್ಕಳು ಮತ್ತು ಯುವಜನರಲ್ಲಿ ವಿಜ್ಞಾನ, ತಂತ್ರಜ್ಞಾನ ಹಾಗೂ ಸಂಶೋಧನೆಯ ಬಗ್ಗೆ ಆಸಕ್ತಿ ಹೆಚ್ಚುತ್ತಿದೆ ಎಂದು ಹೇಳಿದರು.

ಚಂದ್ರಯಾನ-3 ಭಾರತದ ಮಹತ್ವದ ಸಾಧನೆ: ವಿ. ನಾರಾಯಣನ್

ಇಸ್ರೋ ಅಧ್ಯಕ್ಷ ಹಾಗೂ ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿ ಡಾ. ವಿ. ನಾರಾಯಣನ್ ಅವರು ಅಹಮದಾಬಾದ್‌ನಲ್ಲಿ ನಡೆದ ಮೂರನೇ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆಯಲ್ಲಿ ಮಾತನಾಡಿ, ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತವನ್ನು ಜಾಗತಿಕ ನಾಯಕತ್ವದತ್ತ ಕೊಂಡೊಯ್ಯಲು ನವೀನತೆ, ಸಹಕಾರ ಮತ್ತು ಮಹತ್ವಾಕಾಂಕ್ಷೆಯ ಗುರಿಗಳ ಅಗತ್ಯವಿದೆ ಎಂದು ಹೇಳಿದರು.

ಭಾರತದ ಬಾಹ್ಯಾಕಾಶ ಕಾರ್ಯಕ್ರಮ ಆರಂಭವಾದ ಸಂದರ್ಭದಲ್ಲಿ ರಾಕೆಟ್‌ನ ಬಿಡಿಭಾಗಗಳನ್ನು ಹಳೆಯ ಸೈಕಲ್‌ಗಳಲ್ಲಿ ಸಾಗಿಸಲಾಗುತ್ತಿತ್ತು. ಅಂತಹ ಸರಳ ಆರಂಭದಿಂದ ಮುನ್ನಡೆದ ಭಾರತ ಇಂದು ಬಾಹ್ಯಾಕಾಶ ಕ್ಷೇತ್ರದ ಒಂಬತ್ತು ವಲಯಗಳಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೇರಿದೆ ಎಂದು ಅವರು ಹೇಳಿದರು.

ಚಂದ್ರಯಾನ-3ರ ಐತಿಹಾಸಿಕ ಯಶಸ್ಸನ್ನು ಉಲ್ಲೇಖಿಸಿದ ನಾರಾಯಣನ್, ಚಂದ್ರನ ದಕ್ಷಿಣ ಧ್ರುವದ ಸಮೀಪ ಯಶಸ್ವಿಯಾಗಿ ಮೃದು ಇಳಿಕೆ ಮಾಡಿರುವುದು ಭಾರತದ ಮಹತ್ವದ ಸಾಧನೆ ಎಂದರು. ಈ ಯೋಜನೆಯ ಯಶಸ್ಸು ಕೇವಲ ಚಂದ್ರನ ಮೇಲ್ಮೈಯಲ್ಲಿ ಸುರಕ್ಷಿತವಾಗಿ ಇಳಿಯುವುದಕ್ಕೆ ಸೀಮಿತವಾಗಿಲ್ಲ. ಮಹತ್ವದ ವೈಜ್ಞಾನಿಕ ದತ್ತಾಂಶವನ್ನು ಸಂಗ್ರಹಿಸಲಾಗಿದ್ದು, ಅದನ್ನು ವಿಶ್ವದ ವೈಜ್ಞಾನಿಕ ಸಮುದಾಯದ ಸಂಶೋಧನೆಗಾಗಿ ಮುಕ್ತಗೊಳಿಸಲಾಗಿದೆ ಎಂದು ತಿಳಿಸಿದರು.

ಚಂದ್ರಯಾನ-3 ಯೋಜನೆಯ ಮತ್ತೊಂದು ಪ್ರಮುಖ ಸಾಧನೆಯೆಂದರೆ ಅದು ದೇಶದ 140 ಕೋಟಿ ಜನರಲ್ಲಿ, ವಿಶೇಷವಾಗಿ ಮಕ್ಕಳು ಮತ್ತು ಯುವಜನರಲ್ಲಿ ಬಾಹ್ಯಾಕಾಶ ವಿಜ್ಞಾನದ ಬಗ್ಗೆ ಹೊಸ ಕನಸು ಮತ್ತು ಆಸಕ್ತಿಯನ್ನು ಮೂಡಿಸಿರುವುದು ಎಂದು ಡಾ. ನಾರಾಯಣನ್ ಹೇಳಿದರು.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande