ಯಾರೂ ನಿಮ್ಮ ಕೈ ಬಿಡುವುದಿಲ್ಲ:ಸ್ಟಾರ್ಟ್ಅಪ್ಗಳಿಗೆ ಪ್ರಧಾನಿ ಮೋದಿ ಭರವಸೆ
ನವದೆಹಲಿ, 23 ಆಗಸ್ಟ್ (ಹಿ.ಸ.): ಆ್ಯಂಕರ್: ಬಾಹ್ಯಾಕಾಶ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಟಾರ್ಟ್‌ಅಪ್ ಸಂಸ್ಥೆಗಳ ಯುವ ಉದ್ಯಮಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ನಡೆಸಿದ ಸಂವಾದದ ವಿಡಿಯೊವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನದ ಅಂಗವಾಗಿ ಭಾನುವಾರ ಬಿಡುಗಡೆ ಮಾಡಲಾಗಿದೆ. ಈ ವೇಳೆ ಸ್ಟಾರ್ಟ್
प्रधानमंत्री युवा स्टार्टअप से संवाद करते हुए


ನವದೆಹಲಿ, 23 ಆಗಸ್ಟ್ (ಹಿ.ಸ.):

ಆ್ಯಂಕರ್:

ಬಾಹ್ಯಾಕಾಶ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಟಾರ್ಟ್‌ಅಪ್ ಸಂಸ್ಥೆಗಳ ಯುವ ಉದ್ಯಮಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ನಡೆಸಿದ ಸಂವಾದದ ವಿಡಿಯೊವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನದ ಅಂಗವಾಗಿ ಭಾನುವಾರ ಬಿಡುಗಡೆ ಮಾಡಲಾಗಿದೆ. ಈ ವೇಳೆ ಸ್ಟಾರ್ಟ್‌ಅಪ್‌ಗಳಿಗೆ ಸರ್ಕಾರ ಸಂಪೂರ್ಣ ಬೆಂಬಲ ನೀಡುವುದಾಗಿ ಪ್ರಧಾನಿ ಭರವಸೆ ನೀಡಿದ್ದಾರೆ.

ಪ್ರಧಾನಿ ನಿವಾಸದಲ್ಲಿ ನಡೆದ ಸಂವಾದದಲ್ಲಿ ಮಾತನಾಡಿದ ಮೋದಿ, ಹೊಸ ಕ್ಷೇತ್ರದಲ್ಲಿ ಸಾಹಸ ತೋರಿರುವ ಯುವ ಉದ್ಯಮಿಗಳು ಸರ್ಕಾರದ ಮೇಲೆ ನಂಬಿಕೆ ಇಟ್ಟಿರುವುದು ಅತ್ಯಂತ ಮಹತ್ವದ್ದಾಗಿದೆ ಎಂದರು. ಸರ್ಕಾರದ ನೀತಿಗಳಲ್ಲಿ ಸ್ಥಿರತೆ ಇರಬೇಕು; ಆಗ ಹೊಸ ಪ್ರಯತ್ನಗಳನ್ನು ಕೈಗೊಳ್ಳುವವರಿಗೆ ವಿಶ್ವಾಸ ಮೂಡುತ್ತದೆ ಎಂದು ಹೇಳಿದರು.

“ನೀವು ತಪ್ಪು ಮಾಡಿದರೂ ಪರವಾಗಿಲ್ಲ, ಆದರೆ ಸರ್ಕಾರ ನಿಮ್ಮ ಕೈ ಬಿಡುವುದಿಲ್ಲ ಎಂಬ ನಂಬಿಕೆಯನ್ನು ಮೂಡಿಸುವುದು ನಮ್ಮ ಪ್ರಯತ್ನ,” ಎಂದು ಪ್ರಧಾನಿ ಹೇಳಿದರು.

ಭಾರತೀಯ ಕಂಪನಿಗಳಿಗೆ ಜಾಗತಿಕ ಮಟ್ಟದಲ್ಲಿ ಉತ್ತಮ ಅವಕಾಶಗಳು ಸಿಗುತ್ತಿದ್ದು, ಸರ್ಕಾರದಿಂದ ರಫ್ತು ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ನೆರವು ದೊರೆಯುತ್ತಿದೆ ಎಂದು ಯುವ ಉದ್ಯಮಿಗಳು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪ್ರಧಾನಿ, ಭಾರತದ ಪ್ರತಿಭೆ, ಸ್ಪರ್ಧಾತ್ಮಕ ವೆಚ್ಚ ಮತ್ತು ಅಪಾಯ ಸ್ವೀಕರಿಸುವ ಸಾಮರ್ಥ್ಯ ದೇಶವನ್ನು ಜಾಗತಿಕ ಮಟ್ಟದಲ್ಲಿ ಮುನ್ನಡೆಸಲಿದೆ ಎಂದು ಹೇಳಿದರು.

ಅಂತರಿಕ್ಷ ಕ್ಷೇತ್ರದಲ್ಲಿ ಭಾರತದಲ್ಲಿ ನಿರ್ಮಾಣವಾಗುತ್ತಿರುವ ಪರಿಸರ ವ್ಯವಸ್ಥೆ ವಿಶ್ವದ ಪ್ರತಿಭಾವಂತರನ್ನು ಆಕರ್ಷಿಸುವ ಶಕ್ತಿಯಾಗಿದೆ. ವಿದೇಶಗಳಲ್ಲಿ ಕೆಲಸ ಮಾಡುತ್ತಿರುವ ಭಾರತೀಯ ತಜ್ಞರು ಮತ್ತೆ ದೇಶಕ್ಕೆ ಮರಳಿ ಸ್ಟಾರ್ಟ್‌ಅಪ್‌ಗಳೊಂದಿಗೆ ಕೈಜೋಡಿಸಲು ಆಸಕ್ತಿ ತೋರಿಸುತ್ತಿದ್ದಾರೆ ಎಂದರು.

ಅಗ್ನಿಕುಲ್ ಕಾಸ್ಮೋಸ್, ಸ್ಕೈರೂಟ್ ಏರೋಸ್ಪೇಸ್ ಮತ್ತು ಪಿಕ್ಸೆಲ್‌ ಸೇರಿದಂತೆ ಹಲವು ಖಾಸಗಿ ಸಂಸ್ಥೆಗಳು ಉಪಗ್ರಹ, ಉಡಾವಣಾ ವಾಹನ ಹಾಗೂ ಬಾಹ್ಯಾಕಾಶ ತಂತ್ರಜ್ಞಾನ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರವಹಿಸುತ್ತಿದ್ದು, ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದ ಬೆಳವಣಿಗೆಗೆ ಉತ್ತೇಜನ ನೀಡಿವೆ ಎಂದು ಪ್ರಧಾನಿ ಅಭಿಪ್ರಾಯಪಟ್ಟರು.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande