
ಬೆಂಗಳೂರು, 23 ಆಗಸ್ಟ್ (ಹಿ.ಸ.):
ಆ್ಯಂಕರ್:
ಪ್ರಸ್ತಾವಿತ ಸುರಂಗ ರಸ್ತೆ ಯೋಜನೆಯಿಂದ ಲಾಲ್‌ಬಾಗ್‌ನ ಪರಿಸರ ವ್ಯವಸ್ಥೆಗೆ ಉಂಟಾಗಬಹುದಾದ ಅಪಾಯಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಾಲ್‌ಬಾಗ್ ವಾಕರ್ಸ್ ಅಸೋಸಿಯೇಷನ್ ವತಿಯಿಂದ ಲಾಲ್‌ಬಾಗ್ ಕೆರೆಯಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಬ್ಬನ್ ಪಾರ್ಕ್ ಮತ್ತು ಲಾಲ್‌ಬಾಗ್ ವಾಕರ್ಸ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ನ್ಯಾಯವಾದಿ ಡಾ. ಎಸ್. ಉಮೇಶ್ ಕುಮಾರ್ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಡಾ. ಶಶಿ ಕುಮಾರ್, ಪ್ರೊ. ಬಿ.ವಿ. ಸುಮಾ, ಮನೋಜ್, ಉಷಾ, ಇಂದ್ರಾಣಿ ಸೇರಿದಂತೆ ಅಸೋಸಿಯೇಷನ್ ಸದಸ್ಯರು ಭಾಗವಹಿಸಿ, ಸುರಂಗ ರಸ್ತೆ ಯೋಜನೆಯಿಂದ ಲಾಲ್‌ಬಾಗ್‌ನ ಹಸಿರು ಪರಿಸರ, ಜಲಮೂಲಗಳು ಹಾಗೂ ಜೀವವೈವಿಧ್ಯದ ಮೇಲೆ ಉಂಟಾಗಬಹುದಾದ ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಲಾಲ್‌ಬಾಗ್‌ನ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು ಹಾಗೂ ಯಾವುದೇ ಅಭಿವೃದ್ಧಿ ಯೋಜನೆ ಕೈಗೊಳ್ಳುವ ಮುನ್ನ ಅದರ ಪರಿಸರ ಪರಿಣಾಮಗಳ ಕುರಿತು ಸಮಗ್ರ ಅಧ್ಯಯನ ನಡೆಸಬೇಕು ಎಂದು ಕಾರ್ಯಕ್ರಮದಲ್ಲಿ ಒತ್ತಾಯಿಸಲಾಯಿತು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.