
ಬಾಗಲಕೋಟೆ, 23 ಆಗಸ್ಟ್ (ಹಿ.ಸ.):
ಆ್ಯಂಕರ್:ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಗೋಠೆ ಗ್ರಾಮದಲ್ಲಿ ಸತ್ಯಶೋಧಕ ಸಂಘ ಕರ್ನಾಟಕದ ಜಮಖಂಡಿ ತಾಲೂಕು ಘಟಕದ ವತಿಯಿಂದ ಆಯೋಜಿಸಿದ್ದ ‘ಬುದ್ಧ–ಬಸವ–ಅಂಬೇಡ್ಕರ್ ಸಂಗಮ’ ಕಾರ್ಯಕ್ರಮದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಭಾಗವಹಿಸಿ ಮಾತನಾಡಿದರು.
ಭಗವಾನ್ ಬುದ್ಧ, ಜಗಜ್ಯೋತಿ ಬಸವಣ್ಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಮಾನತೆ, ಸಾಮಾಜಿಕ ನ್ಯಾಯ, ವೈಚಾರಿಕತೆ ಮತ್ತು ಮಾನವೀಯ ಮೌಲ್ಯಗಳ ಪ್ರತೀಕರಾಗಿದ್ದಾರೆ. ಅವರ ಮಹಾನ್ ಚಿಂತನೆಗಳು ಹಾಗೂ ಆದರ್ಶಗಳನ್ನು ಸ್ಮರಿಸಿ, ಸಮಾಜದಲ್ಲಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ಬಲಪಡಿಸುವ ಅಗತ್ಯವಿದೆ ಎಂದು ಹೇಳಿದರು.
ಅಸಮಾನತೆ, ಶೋಷಣೆ ಹಾಗೂ ಮೌಢ್ಯಮುಕ್ತ ಸಮಾಜ ನಿರ್ಮಾಣದ ಆಶಯದೊಂದಿಗೆ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಹಾದಿಯಲ್ಲಿ ಸಾಗುವ ಸಂಕಲ್ಪ ಸದಾ ಮುಂದುವರಿಯಲಿದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಸಚಿವ ವಿಜಯಾನಂದ ಕಾಶಪ್ಪನವರ, ಶಾಸಕ ಜೆ.ಟಿ. ಪಾಟೀಲ, ಮುಖಂಡ ಸಿದ್ದು ಕೊಣ್ಣೂರ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.