
ಧಾರವಾಡ, 23 ಆಗಸ್ಟ್ (ಹಿ.ಸ.):
ಆ್ಯಂಕರ್:
2026-27ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಸಮುದಾಯದ ಪಿಎಚ್.ಡಿ. ಹಾಗೂ ಎಂ.ಫಿಲ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಜೆಆರ್‌ಎಫ್ ಮಾದರಿಯ ಫೆಲೋಶಿಪ್ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಅಕ್ಟೋಬರ್ 31, 2026ರೊಳಗಾಗಿ ಸೇವಾ ಸಿಂಧು ಜಾಲತಾಣದ ಮೂಲಕ ಅರ್ಜಿ ಸಲ್ಲಿಸಿ, ಅದರ ಮುದ್ರಿತ ಪ್ರತಿಯನ್ನು ಜಿಲ್ಲಾ ಕಾರ್ಯಾಲಯಕ್ಕೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿಯ 0836-2971590, 9738287549 ದೂರವಾಣಿ ಸಂಖ್ಯೆಗಳು ಅಥವಾ 24x7 ಸಹಾಯವಾಣಿ 8277799990ಕ್ಕೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.