
ಧಾರವಾಡ, 23 ಆಗಸ್ಟ್ (ಹಿ.ಸ.):
ಆ್ಯಂಕರ್:
2026-27ನೇ ಸಾಲಿನಲ್ಲಿ ಐಐಟಿ, ಐಐಐಟಿ ಸೇರಿದಂತೆ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಕೋರ್ಸ್‌ನ ಪೂರ್ಣ ಅವಧಿಯಲ್ಲಿ ಒಮ್ಮೆ ಪ್ರೋತ್ಸಾಹಧನ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಅಕ್ಟೋಬರ್ 31, 2026ರೊಳಗಾಗಿ ಸೇವಾ ಸಿಂಧು ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಾಲತಾಣವನ್ನು ಪರಿಶೀಲಿಸಬಹುದು ಅಥವಾ 8277799990 ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.