ಬಳ್ಳಾರಿ: ಸೆ.15 ರವರೆಗೆ ಜಾಬ್ ಕಾರ್ಡ್ ಮೇಳ ಆಯೋಜನೆ: ಜಿಪಂ ಸಿಇಒ
ಬಳ್ಳಾರಿ, 24 ಆಗಸ್ಟ್ (ಹಿ.ಸ.): ಆ್ಯಂಕರ್ : ‘ ವಿಕಸಿತ ಭಾರತ- ಗ್ಯಾರಂಟಿ ಫಾರ್ ರೋಜ್ಗಾರ್ ಅಜೀವಿಕ ಮಿಷನ್'' ಯೋಜನೆಯಡಿ ಜಿಲ್ಲೆಯಲ್ಲಿ ಸೆಪ್ಟೆಂಬರ್ 15 ರವರೆಗೆ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತಿಂಗಳ ಕಾಲ ‘ಜಾಬ್ ಕಾರ್ಡ್ ಮೇಳ’ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮ
Bellary: ‘Job Card Mela’ to be organized till September 15: ZP CEO


ಬಳ್ಳಾರಿ, 24 ಆಗಸ್ಟ್ (ಹಿ.ಸ.):

ಆ್ಯಂಕರ್ : ‘

ವಿಕಸಿತ ಭಾರತ- ಗ್ಯಾರಂಟಿ ಫಾರ್ ರೋಜ್ಗಾರ್ ಅಜೀವಿಕ ಮಿಷನ್' ಯೋಜನೆಯಡಿ ಜಿಲ್ಲೆಯಲ್ಲಿ ಸೆಪ್ಟೆಂಬರ್ 15 ರವರೆಗೆ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತಿಂಗಳ ಕಾಲ ‘ಜಾಬ್ ಕಾರ್ಡ್ ಮೇಳ’ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಗ್ರಾಮೀಣ ಜನರಿಗೆ ಸ್ಥಳೀಯ ಮಟ್ಟದಲ್ಲೇ ಉದ್ಯೋಗ ಕಲ್ಪಿಸಲು ಹಾಗೂ ನಗರಗಳಿಗೆ ವಲಸೆ ಹೋಗುವುದನ್ನು ತಡೆಗಟ್ಟಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.

‘ಪ್ರತಿ ಮನೆಗೆ ಭೇಟಿ- ಪ್ರತಿ ಕುಟುಂಬಕ್ಕೆ ಉದ್ಯೋಗ ಭದ್ರತೆ’ ಎಂಬ ಧ್ಯೇಯವಾಕ್ಯದೊಂದಿಗೆ ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡಿ ನೋಂದಣಿ ಕಾರ್ಯ ಹಾಗೂ ಜಾಗೃತಿ ಮೂಡಿಸಲಿದ್ದಾರೆ.

ಅಭಿಯಾನದ ಸೌಲಭ್ಯಗಳು:

ಉದ್ಯೋಗಾವಕಾಶ: ಪ್ರತಿ ಕುಟುಂಬಕ್ಕೆ ವರ್ಷದಲ್ಲಿ 125 ದಿನಗಳ ಉದ್ಯೋಗ ಖಾತರಿ.

ದೈನಂದಿನ ಕೂಲಿ: ದಿನಕ್ಕೆ ರೂ.382 ನಿಗದಿತ ಕೂಲಿ ನೀಡಿಕೆ.

ಜೀವನೋಪಾಯ ರಕ್ಷಣೆ: ಸ್ಥಳೀಯವಾಗಿಯೇ ಅಕುಶಲ ಕೆಲಸ ನೀಡಿ ನಗರಗಳಿಗೆ ವಲಸೆ ಹೋಗುವುದನ್ನು ನಿಯಂತ್ರಿಸುವುದು.

ಕೈಗೆತ್ತಿಕೊಳ್ಳಲಾಗುವ ಕಾಮಗಾರಿಗಳು:

ಬರ ಮತ್ತು ಜಲ ಸಂರಕ್ಷಣೆ: ಕೃಷಿ ಹೊಂಡ, ತೆರೆದ ಬಾವಿ ನಿರ್ಮಾಣ, ಕೊಳವೆ ಬಾವಿ ಮರುಪೂರಣ ಘಟಕಗಳು ಮತ್ತು ನಾಲಾಗಳಿಗೆ ತಡೆಗೋಡೆ ನಿರ್ಮಾಣ.

ವೈಯಕ್ತಿಕ ಜೀವನೋಪಾಯ: ಫಲಾನುಭವಿಗಳ ಜಮೀನಿನಲ್ಲಿ ದನದ ಕೊಟ್ಟಿಗೆ, ಕುರಿ ಮತ್ತು ಮೇಕೆ ಶೆಡ್ಗಳ ನಿರ್ಮಾಣಕ್ಕೆ ಆದ್ಯತೆ.

ಗ್ರಾಮೀಣ ಭಾಗದ ಅರ್ಹ ಫಲಾನುಭವಿಗಳು ಈ ಅಭಿಯಾನದ ಸದುಪಯೋಗ ಪಡೆದುಕೊಂಡು, ಹೊಸ ಜಾಬ್ ಕಾರ್ಡ್ ಪಡೆಯಲು ಹಾಗೂ ಹೆಚ್ಚಿನ ಮಾಹಿತಿಗಾಗಿ ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಕಾರ್ಯಾಲಯವನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande