ಚಿಕ್ಕಮಗಳೂರಿನ ಘಟನೆ: ದೇಶವಿರೋಧಿ ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ವಿಜಯೇಂದ್ರ ಆಗ್ರಹ
ಬೆಂಗಳೂರು, 24 ಆಗಸ್ಟ್ (ಹಿ.ಸ.): ಆ್ಯಂಕರ್:ಚಿಕ್ಕಮಗಳೂರಿನಲ್ಲಿ ಕಟೌಟ್ ಪ್ರದರ್ಶನದ ವೇಳೆ ದೇಶವಿರೋಧಿ ಹಾಗೂ ಮುಜಾಹಿದ್ದೀನ್ ಬೆಂಬಲಿತ ಹಾಡುಗಳನ್ನು ಬಳಸಲಾಗಿದೆ ಎಂಬ ಆರೋಪದ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಸ್ಥಳೀಯ ಪುಂಡಾಟಿಕೆಯಲ್ಲ.
ಚಿಕ್ಕಮಗಳೂರಿನ ಘಟನೆ: ದೇಶವಿರೋಧಿ ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ವಿಜಯೇಂದ್ರ ಆಗ್ರಹ


ಬೆಂಗಳೂರು, 24 ಆಗಸ್ಟ್ (ಹಿ.ಸ.):

ಆ್ಯಂಕರ್:ಚಿಕ್ಕಮಗಳೂರಿನಲ್ಲಿ ಕಟೌಟ್ ಪ್ರದರ್ಶನದ ವೇಳೆ ದೇಶವಿರೋಧಿ ಹಾಗೂ ಮುಜಾಹಿದ್ದೀನ್ ಬೆಂಬಲಿತ ಹಾಡುಗಳನ್ನು ಬಳಸಲಾಗಿದೆ ಎಂಬ ಆರೋಪದ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆ ಸ್ಥಳೀಯ ಪುಂಡಾಟಿಕೆಯಲ್ಲ. ಹಿಂದೂ ಸಮಾಜವನ್ನು ಕೆರಳಿಸಿ ಕರ್ನಾಟಕದ ಶಾಂತಿ ಕದಡುವ ಉದ್ದೇಶಪೂರ್ವಕ ಹುನ್ನಾರ ಹಾಗೂ ದೇಶವಿರೋಧಿ ಶಕ್ತಿಗಳ ಸವಾಲಾಗಿದೆ ಎಂದು ಅವರು ಎಕ್ಸ್‌ನಲ್ಲಿ ಆರೋಪಿಸಿದ್ದಾರೆ.

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಪ್ರಶ್ನಿಸಿರುವ ವಿಜಯೇಂದ್ರ, ಇಂತಹ ಪ್ರಚೋದನಕಾರಿ ಹಾಡುಗಳ ಬಳಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಹಿಂದೂ ಕಾರ್ಯಕರ್ತರ ಮೇಲೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಸರ್ಕಾರ, ಬಹಿರಂಗವಾಗಿ ಪ್ರಚೋದನೆ ನೀಡುತ್ತಿರುವವರ ವಿರುದ್ಧವೂ ಸಮಾನವಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರದ ಓಲೈಕೆ ರಾಜಕಾರಣದಿಂದ ಇಂತಹ ಶಕ್ತಿಗಳಿಗೆ ಧೈರ್ಯ ಬಂದಿದೆ ಎಂದು ಆರೋಪಿಸಿರುವ ಅವರು, ಕೇವಲ ಎಫ್‌ಐಆರ್ ದಾಖಲಿಸಿ ಕೈತೊಳೆದುಕೊಳ್ಳದೆ, ಕೃತ್ಯದ ಹಿಂದೆ ಇರುವವರು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅದನ್ನು ಹರಡಿದವರನ್ನು ಪತ್ತೆಹಚ್ಚಿ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಅರ್ಥವಿದ್ದರೆ ಸರ್ಕಾರ ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ದೃಢವಾದ ಕ್ರಮ ಕೈಗೊಂಡು, ರಾಜ್ಯದ ಜನರಲ್ಲಿ ಸರ್ಕಾರದ ಬಗ್ಗೆ ವಿಶ್ವಾಸ ಮೂಡಿಸಬೇಕು ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande