ಕರಡು ಮತದಾರರ ಪಟ್ಟಿ ಪ್ರಕಟ: ಸೆ.23ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ
ಹಾಸನ, 24 ಆಗಸ್ಟ್ (ಹಿ.ಸ.): ಆ್ಯಂಕರ್:ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದ ಭಾಗವಾಗಿ ಜಿಲ್ಲೆಯಲ್ಲಿ ಕರಡು ಮತದಾರರ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಕರಡು ಮತದ
Sir


ಹಾಸನ, 24 ಆಗಸ್ಟ್ (ಹಿ.ಸ.):

ಆ್ಯಂಕರ್:ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದ ಭಾಗವಾಗಿ ಜಿಲ್ಲೆಯಲ್ಲಿ ಕರಡು ಮತದಾರರ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಕರಡು ಮತದಾರರ ಪಟ್ಟಿಯನ್ನು ಹಸ್ತಾಂತರಿಸಿ ಮಾತನಾಡಿದ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಆ.24ರಿಂದ ಸೆ.23ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿದೆ ಎಂದು ತಿಳಿಸಿದರು.

ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ನೋಟಿಸ್ ಪಡೆದ ಮತದಾರರು ನಿಗದಿತ ಸ್ಥಳ, ಸಮಯ ಹಾಗೂ ದಿನಾಂಕದಂದು ವಿಚಾರಣೆಗೆ ಹಾಜರಾಗಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಅಂತಿಮ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆಗೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

ಆ.24ರಿಂದ ಅ.22ರವರೆಗೆ ನೋಟಿಸ್ ಅವಧಿ ಹಾಗೂ ವಿಲೇವಾರಿ ಪ್ರಕ್ರಿಯೆ ನಡೆಯಲಿದ್ದು, ಅ.27ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಅಗತ್ಯ ದಾಖಲೆಗಳೊಂದಿಗೆ ನಮೂನೆ-6 ಸಲ್ಲಿಸಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. 2026ರ ಅಕ್ಟೋಬರ್ 1ರಂದು 18 ವರ್ಷ ಪೂರ್ಣಗೊಳ್ಳುವವರೂ ನಮೂನೆ-6 ಸಲ್ಲಿಸಬಹುದಾಗಿದೆ ಎಂದು ಅವರು ಹೇಳಿದರು.

ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಚುನಾವಣಾ ಶಾಖೆಯ ತಹಶೀಲ್ದಾರ್ ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande