
ಬೆಂಗಳೂರು, 24 ಆಗಸ್ಟ್ (ಹಿ.ಸ.):
ಆ್ಯಂಕರ್:
ಜಿಬಿಎ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಎನ್‌ಡಿಎಂಎಫ್, ವಿಶ್ವಬ್ಯಾಂಕ್ ಅನುದಾನ, ವೈಟ್‌ಟಾಪಿಂಗ್ ಹಾಗೂ ಬಫರ್ ರಸ್ತೆ ಕಾಮಗಾರಿಗಳ ಪ್ರಗತಿಯನ್ನು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಪರಿಶೀಲಿಸಿದರು. ಬಾಕಿ ಉಳಿದಿರುವ ಕಾಮಗಾರಿಗಳಿಗೆ ವೇಗ ನೀಡಿ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
237.25 ಕೋಟಿ ವೆಚ್ಚದ ಎನ್‌ಡಿಎಂಎಫ್ ಯೋಜನೆಯ 20 ಪ್ಯಾಕೇಜ್‌ಗಳಲ್ಲಿ ಶೇ.55ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಡಿಸೆಂಬರ್ ವೇಳೆಗೆ ಸಂಪೂರ್ಣ ಕಾಮಗಾರಿ ಮುಗಿಸುವಂತೆ ನಿರ್ದೇಶನ ನೀಡಿದರು.
₹2,000 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆಯಡಿ 16 ಪ್ಯಾಕೇಜ್‌ಗಳಲ್ಲಿ ನಡೆಯುತ್ತಿರುವ ರಾಜಕಾಲುವೆ ಅಭಿವೃದ್ಧಿ ಕಾಮಗಾರಿಗಳಿಗೂ ವೇಗ ನೀಡುವಂತೆ ಸೂಚಿಸಿದರು.
₹1,700 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ 120.69 ಕಿ.ಮೀ. ವೈಟ್‌ಟಾಪಿಂಗ್ ರಸ್ತೆ ಕಾಮಗಾರಿಯಲ್ಲಿ 61.43 ಕಿ.ಮೀ. ಅಂದರೆ ಶೇ.51ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಉಳಿದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಲಾಯಿತು.
ಬಫರ್ ರಸ್ತೆ ಕಾಮಗಾರಿಗಳಿಗೆ ಅಡ್ಡಿಯಾಗಿರುವ ಭೂಸ್ವಾಧೀನ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಿ ಕಾಮಗಾರಿಗಳಿಗೆ ವೇಗ ನೀಡುವಂತೆ ಅಧಿಕಾರಿಗಳಿಗೆ ಮಹೇಶ್ವರ್ ರಾವ್ ನಿರ್ದೇಶನ ನೀಡಿದರು. ನಗರ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಜಿಬಿಎ ಬದ್ಧವಾಗಿದೆ ಎಂದು ತಿಳಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.