ಕಾರ್ಮಿಕ ಹಕ್ಕುಗಳಿಗಾಗಿ ಅನಿರ್ದಿಷ್ಟ ಪ್ರತಿಭಟನೆ
ಬಾಗಲಕೋಟೆ, 24 ಆಗಸ್ಟ್ (ಹಿ.ಸ.) ಆ್ಯಂಕರ್ : ಕರ್ನಾಟಕ ರಾಜ್ಯ ಬಹು ಹಳ್ಳಿ ಕುಡಿಯುವ ನೀರು ಸರಬರಾಜು ನೌಕರರ ಸಂಘ (ಅ) ಹಾಗೂ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ವತಿಯಿಂದ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 24, 2026ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟ ಪ್ರತಿಭ
ಪ್ರತಿಭಟನೆ


ಬಾಗಲಕೋಟೆ, 24 ಆಗಸ್ಟ್ (ಹಿ.ಸ.)

ಆ್ಯಂಕರ್ : ಕರ್ನಾಟಕ ರಾಜ್ಯ ಬಹು ಹಳ್ಳಿ ಕುಡಿಯುವ ನೀರು ಸರಬರಾಜು ನೌಕರರ ಸಂಘ (ಅ) ಹಾಗೂ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ವತಿಯಿಂದ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 24, 2026ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟ ಪ್ರತಿಭಟನೆ ಆರಂಭಿಸಲಾಗಿದೆ.

ಬಹು ಹಳ್ಳಿ ಕುಡಿಯುವ ನೀರು ಸರಬರಾಜು ಯೋಜನೆಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಉದ್ಯೋಗ ಭದ್ರತೆ ಕಲ್ಪಿಸಬೇಕು. ನೌಕರರ ಸೇವೆಯನ್ನು ಪರಿಗಣಿಸಿ ಬದ್ಧ (ಖಾಯಂ) ಉದ್ಯೋಗ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಸಂಘದ ಮುಖಂಡರು ಬಾಗಲಕೋಟೆ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ

ಒತ್ತಾಯಿಸಿದ್ದಾರೆ.

ಕಾರ್ಮಿಕರಿಗೆ ಕಾನೂನುಬದ್ಧ ಕನಿಷ್ಠ ವೇತನ ನೀಡಬೇಕು, ಪ್ರತಿಯೊಬ್ಬ ನೌಕರನಿಗೂ ಪಿಎಫ್ , ಇಎಸ್ಐ ಸೌಲಭ್ಯ ಕಲ್ಪಿಸಬೇಕು ಹಾಗೂ ಪ್ರತಿ ತಿಂಗಳು ವೇತನದ ವಿವರಗಳನ್ನು ಒಳಗೊಂಡ ಪೇಸ್ಲಿಪ್ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಜೊತೆಗೆ, ಕಾರ್ಮಿಕರು ಗೌರವಯುತವಾಗಿ ಜೀವನ ನಡೆಸಲು ಅನುಕೂಲವಾಗುವ ರೀತಿಯಲ್ಲಿ ಸಮರ್ಪಕ ಹಾಗೂ ನಿಯಮಿತ ವೇತನ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬಹು ಹಳ್ಳಿ ಕುಡಿಯುವ ನೀರು ಸರಬರಾಜು ಯೋಜನೆಗಳ ನಿರ್ವಹಣೆಯಲ್ಲಿ ನೌಕರರು ಪ್ರಮುಖ ಪಾತ್ರ ವಹಿಸುತ್ತಿದ್ದು, ಗ್ರಾಮೀಣ ಪ್ರದೇಶಗಳ ಜನರಿಗೆ ನಿರಂತರ ಕುಡಿಯುವ ನೀರಿನ ಸೇವೆ ಒದಗಿಸುವಲ್ಲಿ ಅವರ ಸೇವೆ ಮಹತ್ವದ್ದಾಗಿದೆ. ಆದರೆ, ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರೂ ಉದ್ಯೋಗ ಭದ್ರತೆ ಸೇರಿದಂತೆ ಅಗತ್ಯ ಕಾರ್ಮಿಕ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ ಎಂಬುದು ಸಂಘದ ಆರೋಪವಾಗಿದೆ.

ಈ ಹಿನ್ನೆಲೆಯಲ್ಲಿ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳು ಕಾರ್ಮಿಕರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ, ತಕ್ಷಣ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಬೇಕು. ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವವರೆಗೆ ಹೋರಾಟ ಮುಂದುವರಿಸುವುದಾಗಿ ಸಂಘದ ಮುಖಂಡ ಶಿವರಾಜ್ ಎಂಬತ್ನಾಳ ಎಚ್ಚರಿಕೆ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande