ರಾಜ್ಯದಲ್ಲಿ ಚುರುಕಾದ ಮುಂಗಾರು: ಕರಾವಳಿ ಹಾಗೂ ಮಲೆನಾಡಿನಲ್ಲಿ ವ್ಯಾಪಕ ಮಳೆ ಮುನ್ಸೂಚನೆ
ಕರಾವಳಿ ಹಾಗೂ ಮಲೆನಾಡಿನಲ್ಲಿ ವರುಣನ ಆರ್ಭಟ, ಇಂದು-ನಾಳೆ ವ್ಯಾಪಕ ಮಳೆ ಸಾಧ್ಯತೆ
ರಾಜ್ಯದಲ್ಲಿ ಚುರುಕಾದ ಮುಂಗಾರು: ಕರಾವಳಿ ಹಾಗೂ ಮಲೆನಾಡಿನಲ್ಲಿ ವ್ಯಾಪಕ ಮಳೆ ಮುನ್ಸೂಚನೆ


ಬೆಂಗಳೂರು, 24 ಆಗಸ್ಟ್ (ಹಿ.ಸ.):

ಆ್ಯಂಕರ್:

ರಾಜ್ಯದಲ್ಲಿ ನೈಋತ್ಯ ಮುಂಗಾರು ಮತ್ತೊಮ್ಮೆ ಚುರುಕುಗೊಂಡಿದ್ದು, ಮುಂದಿನ ಎರಡು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ಕೆಲವು ದಿನಗಳಿಂದ ಮಂಕಾಗಿದ್ದ ವರುಣ ಇಂದು ಮತ್ತು ನಾಳೆ ರಾಜ್ಯದಾದ್ಯಂತ ತನ್ನ ಪ್ರಭಾವವನ್ನು ವಿಸ್ತರಿಸಲಿದ್ದು, ಕರಾವಳಿ ಹಾಗೂ ಮಲೆನಾಡಿನಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ.

ಕರಾವಳಿಯಲ್ಲಿ ಮಳೆಯಾರ್ಭಟ

ಮೀನುಗಾರರಿಗೆ ಎಚ್ಚರಿಕೆ:

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮಳೆಯ ಅಬ್ಬರ ಗಣನೀಯವಾಗಿ ಹೆಚ್ಚಾಗಲಿದೆ. ಈ ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆಯಿದ್ದು, ಸಮುದ್ರದಲ್ಲಿ ಒರಟಾದ ವಾತಾವರಣವಿರಲಿದೆ. ಹೀಗಾಗಿ, ಕರಾವಳಿ ತೀರದ ಮೀನುಗಾರರು ಮುಂದಿನ ಎರಡು ದಿನಗಳ ಕಾಲ ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಉತ್ತರ ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸಾಧಾರಣದಿಂದ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ.

ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ಮೈಸೂರು, ಹಾಸನ, ಶಿವಮೊಗ್ಗ ಮತ್ತು ಮಂಡ್ಯ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆ ಸುರಿಯುವ ನಿರೀಕ್ಷೆಯಿದೆ.

ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ನದಿ ತೀರದ ಹಾಗೂ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಸಾರ್ವಜನಿಕರು ಯಾವುದೇ ಅಪಾಯಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವಂತೆ ಆಡಳಿತ ಯಂತ್ರವು ಸೂಚಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande