ವಿಧಾನಸಭೆ ಕಾರ್ಯಕಲಾಪ ಪ್ರಸಾರದಲ್ಲಿ ತಾರತಮ್ಯ: ಸಭಾಧ್ಯಕ್ಷರಿಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಪತ್ರ
ಸ್ಪೀಕರ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಪತ್ರ
ವಿಧಾನಸಭೆ ಕಾರ್ಯಕಲಾಪ ಪ್ರಸಾರದಲ್ಲಿ ತಾರತಮ್ಯ: ಸಭಾಧ್ಯಕ್ಷರಿಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಪತ್ರ


ಬೆಂಗಳೂರು, 24 ಆಗಸ್ಟ್ (ಹಿ.ಸ.):

ಆ್ಯಂಕರ್:

ವಿಧಾನಸಭೆಯ ಕಾರ್ಯಕಲಾಪಗಳಲ್ಲಿ ವಿರೋಧ ಪಕ್ಷದ ನಾಯಕರು ಹಾಗೂ ಶಾಸಕರ ಹೇಳಿಕೆಗಳು ಮತ್ತು ವೀಡಿಯೋಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡದೆ ವಾರ್ತಾ ಇಲಾಖೆ ತಾರತಮ್ಯ ಎಸಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ವಿಧಾನಸಭೆ ಸ್ಪೀಕರ್ ಜಿ.ಎಸ್. ಪಾಟೀಲ್ ಅವರಿಗೆ ಪತ್ರ ಬರೆದಿರುವ ಅವರು, ಕೂಡಲೇ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಆಗ್ರಹಿಸಿದ್ದು, ತಪ್ಪಿದಲ್ಲಿ ಹಕ್ಕುಚ್ಯುತಿ ಮಂಡಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಆಗಸ್ಟ್ 13ರಿಂದ ಮಳೆಗಾಲದ ಅಧಿವೇಶನ ನಡೆಯುತ್ತಿದ್ದು, ಕಲಾಪದಲ್ಲಿ ವಿಪಕ್ಷ ನಾಯಕರು ಮತ್ತು ಶಾಸಕರು ಮಂಡಿಸುವ ವಿಚಾರಗಳು, ಭಾಷಣಗಳು ಹಾಗೂ ಧ್ವನಿ-ದೃಶ್ಯ ತುಣುಕುಗಳು ಮುದ್ರಣ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಸಮರ್ಪಕವಾಗಿ ಪ್ರಸಾರವಾಗುತ್ತಿಲ್ಲ. ಬದಲಿಗೆ ಮುಖ್ಯಮಂತ್ರಿಗಳು, ಸಚಿವರು ಹಾಗೂ ಆಡಳಿತ ಪಕ್ಷದ ಸದಸ್ಯರ ಹೇಳಿಕೆಗಳಿಗೆ ಹೆಚ್ಚಿನ ಪ್ರಚಾರ ಹಾಗೂ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಪತ್ರದಲ್ಲಿ ದೂರಲಾಗಿದೆ. ವಿಧಾನಸಭೆಯ ಇತಿಹಾಸದಲ್ಲಿ ಈ ರೀತಿಯ ತಾರತಮ್ಯ ಧೋರಣೆ ಹಿಂದೆಂದೂ ಕಂಡುಬಂದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಾರ್ತಾ ಇಲಾಖೆಯ ಈ ತಾರತಮ್ಯ ಧೋರಣೆಯನ್ನು ತಕ್ಷಣವೇ ಸರಿಪಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಬೇಕು. ಇಲ್ಲದಿದ್ದರೆ ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಕಲಾಪದಲ್ಲಿ ಹಕ್ಕುಚ್ಯುತಿ ಮಂಡಿಸುವುದಾಗಿ ಆರ್. ಅಶೋಕ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande