ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ಬೆಳೆಗಾರರ ಸಂಘದ ಆಗ್ರಹ
ಮುಖ್ಯಮಂತ್ರಿಗಳ ಜೊತೆ ಶಾಸಕ ಆರಗ ಜ್ಞಾನೇಂದ್ರ ನೇತೃತ್ವದ ನಿಯೋಗ ಮಾತುಕತೆ
araku-gnaneshwar-cm-meeting-arecanut


ಬೆಂಗಳೂರು, 24 ಆಗಸ್ಟ್ (ಹಿ.ಸ.):

ಆ್ಯಂಕರ್:

ರಾಜ್ಯದ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ವಿವಿಧ ಗಂಭೀರ ಸಮಸ್ಯೆಗಳ ಕುರಿತು ಚರ್ಚಿಸಲು, ರಾಜ್ಯ ಅಡಿಕೆ ಸಹಕಾರ ಸಂಘಗಳ ಮಹಾಮಂಡಲದ ಅಧ್ಯಕ್ಷ ಹಾಗೂ ಶಾಸಕರಾದ ಆರಗ ಜ್ಞಾನೇಂದ್ರ ಅವರ ನೇತೃತ್ವದ ಪ್ರಮುಖ ನಿಯೋಗವು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಸೋಮವಾರ ಭೇಟಿ ಮಾಡಿ ಮನವಿ ಸಲ್ಲಿಸಿತು.

ಈ ಸಭೆಯಲ್ಲಿ ಅಡಿಕೆ ಬೆಳೆಗೆ ಎದುರಾಗಿರುವ ಎಲೆಚುಕ್ಕಿ ರೋಗದ ಬಾಧೆ, ಮಾರುಕಟ್ಟೆ ಬೆಲೆ ಸ್ಥಿರತೆ ಹಾಗೂ ಬೆಳೆಗಾರರ ಇತರ ಆರ್ಥಿಕ ಸಂಕಷ್ಟಗಳ ಕುರಿತು ವಿಸ್ತೃತ ಚರ್ಚೆ ನಡೆಸಲಾಯಿತು.

ಅಡಿಕೆ ತೋಟಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಎಲೆಚುಕ್ಕಿ ರೋಗ ಹಾಗೂ ಇತರೆ ರೋಗಗಳಿಂದ ತತ್ತರಿಸಿರುವ ರೈತರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಒತ್ತಾಯಿಸಲಾಯಿತು.

ರೋಗ ನಿಯಂತ್ರಣಕ್ಕಾಗಿ ವೈಜ್ಞಾನಿಕ ಸಂಶೋಧನೆ ಹಾಗೂ ಪರಿಣಾಮಕಾರಿ ಔಷಧಿಗಳ ಲಭ್ಯತೆಗೆ ಸರ್ಕಾರದ ವತಿಯಿಂದ ವಿಶೇಷ ಅನುದಾನ ಮತ್ತು ನೆರವು ನೀಡುವಂತೆ ಮನವಿ ಮಾಡಲಾಯಿತು.

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತವಾಗದಂತೆ ತಡೆಯಲು ಮತ್ತು ಸಹಕಾರ ಸಂಘಗಳ ಮೂಲಕ ಬೆಳೆಗಾರರಿಗೆ ಸಿಗಬೇಕಾದ ಸೌಲಭ್ಯಗಳನ್ನು ಬಲಪಡಿಸಲು ಕ್ರಮ ಕೈಗೊಳ್ಳುವಂತೆ ಚರ್ಚಿಸಲಾಯಿತು.

ಮುಖ್ಯಮಂತ್ರಿಗಳು ನಿಯೋಗದ ಬೇಡಿಕೆಗಳನ್ನು ಸಕಾರಾತ್ಮಕವಾಗಿ ಆಲಿಸಿ, ಅಡಿಕೆ ಬೆಳೆಗಾರರ ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande