ಗ್ರಾಮೀಣ ಪ್ರದೇಶದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ 3,000 ರೂ. ನೆರವು: ಸಚಿವ ಈಶ್ವರ ಖಂಡ್ರೆ
ಬೆಂಗಳೂರು.4 ಆಗಸ್ಟ್ (ಹಿ.ಸ.) ಆ್ಯಂಕರ್: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಸ್ಥಾಪಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪುನಶ್ಚೇತನಗೊಳಿಸಲು ಮತ್ತು ಕಾರ್ಯಯೋಗ್ಯಗೊಳಿಸಲು ಪ್ರತಿ ಘಟಕಕ್ಕೆ 3,000 ರೂಪಾಯಿಗಳಂತೆ ವಿಶೇಷ ಅನುದಾನ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ
ಗ್ರಾಮೀಣ ಪ್ರದೇಶದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ 3,000 ರೂ. ನೆರವು: ಸಚಿವ ಈಶ್ವರ ಖಂಡ್ರೆ


ಬೆಂಗಳೂರು.4 ಆಗಸ್ಟ್ (ಹಿ.ಸ.)

ಆ್ಯಂಕರ್:

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಸ್ಥಾಪಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪುನಶ್ಚೇತನಗೊಳಿಸಲು ಮತ್ತು ಕಾರ್ಯಯೋಗ್ಯಗೊಳಿಸಲು ಪ್ರತಿ ಘಟಕಕ್ಕೆ 3,000 ರೂಪಾಯಿಗಳಂತೆ ವಿಶೇಷ ಅನುದಾನ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಪ್ರಶ್ನೋತ್ತರ ಕಲಾಪದ ವೇಳೆ ಈ ಕುರಿತು ಮಾಹಿತಿ ನೀಡಿದ ಅವರು, ರಾಜ್ಯಾದ್ಯಂತ ಒಟ್ಟು 20,340 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಈ ಪೈಕಿ 17,208 ಘಟಕಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಆದರೆ ನಿರ್ವಹಣೆ ಹಾಗೂ ಇತರೆ ಕಾರಣಗಳಿಂದ ಒಟ್ಟು 602 ಘಟಕಗಳು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದರೆ, 2,530 ಘಟಕಗಳು ದುರಸ್ತಿಗೆ ಒಳಪಡಬೇಕಿದೆ ಎಂದು ತಿಳಿಸಿದರು.

ರಾಜ್ಯದಲ್ಲಿರುವ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಒಟ್ಟು 29.50 ಕೋಟಿ ರೂ. ಅನುದಾನವನ್ನು ಹಂಚಿಕೆ ಮಾಡಲಾಗಿದ್ದು, ಈಗಾಗಲೇ 13 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

ಒಂದು ವೇಳೆ ಗ್ರಾಮ ಪಂಚಾಯತಿಗಳಲ್ಲಿ ಸ್ಥಳೀಯವಾಗಿ ಅನುದಾನ ಲಭ್ಯವಿಲ್ಲದಿದ್ದಲ್ಲಿ, ನೇರವಾಗಿ ಇಲಾಖೆಯ ವತಿಯಿಂದಲೇ ಅನುದಾನ ಒದಗಿಸಿ ಘಟಕಗಳನ್ನು ದುರಸ್ತಿ ಮಾಡಲಾಗುವುದು.

ಆನೆಕಲ್ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 228 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಅದರಲ್ಲಿ 219 ಘಟಕಗಳು ಕಾರ್ಯನಿರ್ವಹಿಸುತ್ತಿವೆ ಮತ್ತು 9 ಘಟಕಗಳು ಮಾತ್ರ ಸ್ಥಗಿತಗೊಂಡಿವೆ.

ಗ್ರಾಮೀಣ ಜನರಿಗೆ ನಿರಂತರವಾಗಿ ಶುದ್ಧ ಕುಡಿಯುವ ನೀರು ಪೂರೈಸುವುದೇ ಸರ್ಕಾರದ ಪ್ರಮುಖ ಗುರಿಯಾಗಿದ್ದು, ಸ್ಥಗಿತಗೊಂಡಿರುವ ಎಲ್ಲ ಘಟಕಗಳನ್ನು ಶೀಘ್ರದಲ್ಲೇ ಮರುಚಾಲನೆಗೆ ತರಲಾಗುವುದು ಎಂದು ಸಚಿವರು ಭರವಸೆ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande