
ಬೆಂಗಳೂರು, 25 ಆಗಸ್ಟ್ (ಹಿ.ಸ.):
ಆ್ಯಂಕರ್:ಉದ್ಯಾನಗಳ ಶೇ.5ರಷ್ಟು ಜಾಗವನ್ನು ಇತರೆ ಉದ್ದೇಶಗಳಿಗೆ ಬಳಸಲು ಅವಕಾಶ ನೀಡುವ ಮಸೂದೆಯನ್ನು ಸರ್ಕಾರ ವಾಪಸ್ ಪಡೆಯಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚರ್ಚೆ ಇಲ್ಲದೆ ಹಲವು ಮಸೂದೆಗಳನ್ನು ಅಂಗೀಕರಿಸಲಾಗಿದೆ ಎಂದು ಆರೋಪಿಸಿದರು. ಉದ್ಯಾನಗಳ ನಿಜವಾದ ಮಾಲೀಕರು ಜನರು. ಲಾಲ್‌ಬಾಗ್ ಸೇರಿದಂತೆ ನಗರದ ಉದ್ಯಾನಗಳನ್ನು ರಕ್ಷಿಸಬೇಕಾದ ಸರ್ಕಾರವೇ ಅವುಗಳ ಜಾಗವನ್ನು ಬಳಸಿಕೊಳ್ಳಲು ಮುಂದಾಗಿರುವುದು ಸರಿಯಲ್ಲ ಎಂದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಲ್ಲದರಲ್ಲೂ ರಿಯಲ್ ಎಸ್ಟೇಟ್ ವ್ಯವಹಾರವನ್ನು ಕಾಣುತ್ತಿದ್ದಾರೆ ಎಂದು ಆರೋಪಿಸಿದ ಅಶೋಕ, ಉದ್ಯಾನಗಳ ಸಂರಕ್ಷಣೆಗೆ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಜನರೊಂದಿಗೆ ಸೇರಿ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.