ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ.1ರಿಂದ ಬಿಜೆಪಿಯಿಂದ ಬಳ್ಳಾರಿ ಚಲೋ ಪಾದಯಾತ್ರೆ: ವಿಜಯೇಂದ್ರ
ಬೆಂಗಳೂರು, 25 ಆಗಸ್ಟ್ (ಹಿ.ಸ.): ಆ್ಯಂಕರ್:ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸೆಪ್ಟೆಂಬರ್ 1ರಿಂದ 10 ದಿನಗಳ ಕಾಲ ‘ಬಳ್ಳಾರಿ ಚಲೋ’ ಪಾದಯಾತ್ರೆ ಹಮ್ಮಿಕೊಂಡ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ.1ರಿಂದ ಬಿಜೆಪಿಯಿಂದ ಬಳ್ಳಾರಿ ಚಲೋ ಪಾದಯಾತ್ರೆ: ವಿಜಯೇಂದ್ರ


ಬೆಂಗಳೂರು, 25 ಆಗಸ್ಟ್ (ಹಿ.ಸ.):

ಆ್ಯಂಕರ್:ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸೆಪ್ಟೆಂಬರ್ 1ರಿಂದ 10 ದಿನಗಳ ಕಾಲ ‘ಬಳ್ಳಾರಿ ಚಲೋ’ ಪಾದಯಾತ್ರೆ ಹಮ್ಮಿಕೊಂಡಿದೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವರಾದ ಜಿ. ಜನಾರ್ದನ ರೆಡ್ಡಿ, ಬಿ. ಶ್ರೀರಾಮುಲು, ಸಿ.ಟಿ. ರವಿ ಹಾಗೂ ರಾಜುಗೌಡ ಅವರ ಉಪಸ್ಥಿತಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಈ ಘೋಷಣೆ ಮಾಡಲಾಯಿತು.

ಸೆಪ್ಟೆಂಬರ್ 1ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿವರೆಗೆ ಸುಮಾರು 170 ಕಿ.ಮೀ. ಪಾದಯಾತ್ರೆ ನಡೆಯಲಿದೆ. ಲಿಂಗಸುಗೂರು ಕ್ಷೇತ್ರದ ಗುರಗುಂಟದಿಂದ ಆರಂಭವಾಗುವ ಯಾತ್ರೆ ಲಿಂಗಸುಗೂರು, ಮಸ್ಕಿ, ಸಿಂಧನೂರು, ಶಿರಗುಪ್ಪ, ತೆಕ್ಕಲಕೋಟೆ, ಸಿಂದಗೇರಿ ಮಾರ್ಗವಾಗಿ ಬಳ್ಳಾರಿ ತಲುಪಲಿದೆ.

ಪಾದಯಾತ್ರೆಗೆ ಜೆಡಿಎಸ್ ಸಂಪೂರ್ಣ ಬೆಂಬಲ ನೀಡಿದ್ದು, ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಎಚ್.ಡಿ. ಕುಮಾರಸ್ವಾಮಿ ಭಾಗವಹಿಸಲಿದ್ದಾರೆ. ಬಳ್ಳಾರಿಯಲ್ಲಿ ನಡೆಯಲಿರುವ ಸಮಾರೋಪ ಸಮಾವೇಶದಲ್ಲಿ ಕೇಂದ್ರದ ಪ್ರಮುಖ ಸಚಿವರು ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ.

ವಿಜಯೇಂದ್ರ ಮಾತನಾಡಿ, “ವಾಲ್ಮೀಕಿ ನಿಗಮದ ಅಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಶಿವಲಿಂಗೇಗೌಡ ಅವರೇ ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಆದರೂ ಪ್ರಮುಖ ಆರೋಪಿಯಾಗಿರುವ ನಾಗೇಂದ್ರ ಅವರಿಂದ ರಾಜೀನಾಮೆ ಪಡೆಯದೆ ಸರ್ಕಾರ ರಕ್ಷಣೆ ಮಾಡುತ್ತಿದೆ” ಎಂದು ಆರೋಪಿಸಿದರು.

ಅಧಿವೇಶನದಲ್ಲಿ ಸತ್ಯವನ್ನು ಎದುರಿಸಲಾಗದೆ ಸರ್ಕಾರ ಕಲಾಪವನ್ನು ಮೊಟಕುಗೊಳಿಸಿ ಪಲಾಯನ ಮಾಡಿದೆ ಎಂದು ಟೀಕಿಸಿದ ಅವರು, ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಟ್ಟು ಬಿಜೆಪಿ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಂಡಾಗ ಇದ್ದ ಉತ್ಸಾಹ ಈಗ ಕಾಣುತ್ತಿಲ್ಲ. ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಹಾಗೂ ಸಿದ್ದರಾಮಯ್ಯ ಅವರ ಅಸಮಾಧಾನಗಳಲ್ಲೇ ಸರ್ಕಾರದ ಸಮಯ ಕಳೆಯುತ್ತಿದೆ. ಸರ್ಕಾರ ಇನ್ನೂ ಸಮರ್ಪಕವಾಗಿ ಕಾರ್ಯಾರಂಭ ಮಾಡಿಲ್ಲ ಎಂದು ವಿಜಯೇಂದ್ರ ದೂರಿದರು.

ಬಡವರ ಕಲ್ಯಾಣ ಮತ್ತು ಯುವಕರಿಗೆ ಉದ್ಯೋಗ ನೀಡುವ ಬದಲು ಸರ್ಕಾರ ರಿಯಲ್ ಎಸ್ಟೇಟ್ ಯೋಜನೆಗಳಲ್ಲಿ ತೊಡಗಿದೆ ಎಂದು ಆರೋಪಿಸಿದ ಅವರು, ಉತ್ತರ ಕರ್ನಾಟಕದ ಅಭಿವೃದ್ಧಿ ಕಡೆಗಣನೆ ಸೇರಿದಂತೆ ಸರ್ಕಾರದ ವೈಫಲ್ಯಗಳನ್ನು ಪಾದಯಾತ್ರೆಯ ಮೂಲಕ ಜನರ ಮುಂದಿಡುವುದಾಗಿ ಹೇಳಿದರು.

ವಾಲ್ಮೀಕಿ ಸಮುದಾಯಕ್ಕೆ ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಶೇ.7ರ ಮೀಸಲಾತಿಯನ್ನು ಪ್ರಸ್ತುತ ಸರ್ಕಾರ ಶೇ.3ಕ್ಕೆ ಇಳಿಸಿ ಅನ್ಯಾಯ ಮಾಡಿದೆ ಎಂದು ಆರೋಪಿಸಿದ ವಿಜಯೇಂದ್ರ, ಈ ಎಲ್ಲ ವಿಚಾರಗಳನ್ನು ಮುಂದಿಟ್ಟುಕೊಂಡು ‘ಬಳ್ಳಾರಿ ಚಲೋ’ ಹೋರಾಟ ನಡೆಸುವುದಾಗಿ ತಿಳಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande