
ಬೆಂಗಳೂರು, 25 ಆಗಸ್ಟ್ (ಹಿ.ಸ.):
ಆ್ಯಂಕರ್:
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ತಮ್ಮ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಆಯಾ ಜಿಲ್ಲೆಗಳ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಪ್ರತ್ಯೇಕವಾಗಿ ಸಮಾಲೋಚನೆ ಸಭೆ ನಡೆಸಿದರು.
ಸಭೆಯಲ್ಲಿ ಜಿಲ್ಲೆಗಳ ಅಭಿವೃದ್ಧಿ ಯೋಜನೆಗಳು, ಕೈಗೊಳ್ಳಬೇಕಿರುವ ಕಾರ್ಯಕ್ರಮಗಳು ಹಾಗೂ ಅವುಗಳ ಅನುಷ್ಠಾನದ ಕುರಿತು ಚರ್ಚೆ ನಡೆಸಲಾಯಿತು.
ಕೆಪಿಸಿಸಿ ಅಧ್ಯಕ್ಷ ಹಾಗೂ ಎಂಎಲ್‌ಸಿ ಬಿ.ಕೆ. ಹರಿಪ್ರಸಾದ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಮಾಜಿ ಸಚಿವರಾದ ಎಚ್.ಕೆ. ಪಾಟೀಲ್, ಸಚಿವರಾದ ಈಶ್ವರ್ ಖಂಡ್ರೆ, ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಗಡಗಿ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.