ನಾಗೇಂದ್ರ ರಾಜೀನಾಮೆ ಕೇಳಿದ ಕೂಡಲೇ ಕಾಂಗ್ರೆಸ್ ಸರ್ಕಾರ ಸದನದಿಂದ ಪಲಾಯನ: ಆರ್. ಅಶೋಕ
ಬೆಂಗಳೂರು, 25 ಆಗಸ್ಟ್ (ಹಿ.ಸ.): ಆ್ಯಂಕರ್:ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಹಗಲು-ರಾತ್ರಿ ಧರಣಿ ನಡೆಸುವುದಾಗಿ ಬಿಜೆಪಿ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್‌ ಸರ್ಕಾರ ಅಧಿವೇಶನವನ್ನು ಮೊಟಕುಗೊಳಿಸಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲ
ನಾಗೇಂದ್ರ ರಾಜೀನಾಮೆ ಕೇಳಿದ ಕೂಡಲೇ ಕಾಂಗ್ರೆಸ್ ಸರ್ಕಾರ ಸದನದಿಂದ ಪಲಾಯನ: ಆರ್. ಅಶೋಕ


ಬೆಂಗಳೂರು, 25 ಆಗಸ್ಟ್ (ಹಿ.ಸ.):

ಆ್ಯಂಕರ್:ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಹಗಲು-ರಾತ್ರಿ ಧರಣಿ ನಡೆಸುವುದಾಗಿ ಬಿಜೆಪಿ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್‌ ಸರ್ಕಾರ ಅಧಿವೇಶನವನ್ನು ಮೊಟಕುಗೊಳಿಸಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಎಲ್ಲ ವಿಷಯಗಳ ಬಗ್ಗೆ ಚರ್ಚೆಗೆ ಬಿಜೆಪಿ ಸಿದ್ಧವಿತ್ತು. ಆದರೆ ಸರ್ಕಾರ ಚರ್ಚೆಗೆ ಹೆದರಿಕೊಂಡು ಮೂರು ದಿನ ಮುನ್ನವೇ ಅಧಿವೇಶನವನ್ನು ರದ್ದು ಮಾಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಆರೋಪ ಎದುರಿಸುತ್ತಿರುವ ಸಚಿವ ನಾಗೇಂದ್ರ ಅವರನ್ನು ರಕ್ಷಿಸಲು ಇಡೀ ಸದನವನ್ನೇ ಮೊಟಕುಗೊಳಿಸಲಾಗಿದೆ” ಎಂದು ದೂರಿದರು.

ಬರ ಪರಿಸ್ಥಿತಿ, ನೈಸ್‌ ಟೋಲ್‌ ಅಕ್ರಮ, ಕೆಪಿಎಸ್‌ಸಿ ಅಕ್ರಮ, ಬೆಂಗಳೂರಿನ ಕಸ ವಿಲೇವಾರಿ ಟೆಂಡರ್‌, ಸುರಂಗ ರಸ್ತೆ ಯೋಜನೆ, ರೇಷನ್‌ ಕಾರ್ಡ್‌ ಕಡಿತ ಸೇರಿದಂತೆ ಹಲವು ವಿಚಾರಗಳ ಕುರಿತು ದಾಖಲೆಗಳೊಂದಿಗೆ ಚರ್ಚೆಗೆ ಬಿಜೆಪಿ ಸಿದ್ಧವಾಗಿತ್ತು. ಆದರೆ ಸರ್ಕಾರ ಅವಕಾಶ ನೀಡಲಿಲ್ಲ ಎಂದು ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande