ಉದ್ಯಾನವನಗಳ ವಿಧೇಯಕಕ್ಕೆ ತೇಜಸ್ವಿ ಸೂರ್ಯ ವಿರೋಧ: ಮರುಪರಿಶೀಲನೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ
ಮರುಪರಿಶೀಲನೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ
Tejasvi Surya Opposes Park Land Diversion Bill, Urges Governor to Seek Reconsideration


ಬೆಂಗಳೂರು, 25 ಆಗಸ್ಟ್ (ಹಿ.ಸ.):

ಆ್ಯಂಕರ್:

ಸಾರ್ವಜನಿಕ ಉದ್ಯಾನವನಗಳ ಶೇ. 5ರಷ್ಟು ಭೂಮಿಯನ್ನು ಪರಭಾರೆ ಮಾಡಲು ಅವಕಾಶ ಕಲ್ಪಿಸುವ ಕರ್ನಾಟಕ ಸರ್ಕಾರದ ವಿಧೇಯಕಕ್ಕೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿತ ಸೂರ್ಯ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿರುವ ಅವರು, ವಿವಾದಿತ ವಿಧೇಯಕವನ್ನು ಸರ್ಕಾರಕ್ಕೆ ವಾಪಸ್ ಕಳುಹಿಸುವಂತೆ ಹಾಗೂ ಮರುಪರಿಶೀಲನೆ ನಡೆಸುವಂತೆ ಮನವಿ ಮಾಡಿದ್ದಾರೆ.

ಲಾಲಬಾಗ್ ಮತ್ತು ಕಬ್ಬನ್ ಪಾರ್ಕ್ ಸೇರಿದಂತೆ ಪ್ರಮುಖ ಹಸಿರು ಪ್ರದೇಶಗಳು ಸಾರ್ವಜನಿಕರ ಜೀವನಾಡಿಯಾಗಿದ್ದು, ಇವುಗಳನ್ನು ವಾಣಿಜ್ಯ ಅಥವಾ ರಿಯಲ್ ಎಸ್ಟೇಟ್ ಯೋಜನೆಗಳಿಗೆ ಮುಕ್ತಗೊಳಿಸಬಾರದು ಎಂದು ತೇಜಸ್ವಿ ಸೂರ್ಯ ಆಗ್ರಹಿಸಿದ್ದಾರೆ.

ಕರ್ನಾಟಕ ಸರ್ಕಾರದ ಉದ್ಯಾನವನಗಳ (ಸಂರಕ್ಷಣೆ) ತಿದ್ದುಪಡಿ ಕಾಯ್ದೆಯು ಪರಿಸರ ನಾಶಕ್ಕೆ ಮುನ್ನುಡಿಯಾಗಲಿದ್ದು, ಇದು ಭವಿಷ್ಯದಲ್ಲಿ ಉದ್ಯಾನಗಳ ಒತ್ತುರಿಗೆ ದಾರಿ ಮಾಡಿಕೊಡಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಅಭಿವೃದ್ಧಿಯ ಹೆಸರಿನಲ್ಲಿ ಹಸಿರು ಪ್ರದೇಶಗಳನ್ನು ಕಾಂಕ್ರೀಟ್ ಕಾಡನ್ನಾಗಿ ಪರಿವರ್ತಿಸುವ ಈ ನಿರ್ಧಾರವನ್ನು ಕೈಬಿಡಬೇಕು ಮತ್ತು ವಿಧೇಯಕವನ್ನು ಮರುಪರಿಶೀಲನೆಗೆ ಕಳುಹಿಸಬೇಕೆಂದು ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande