ಬೆಂಗಳೂರಿನ ರೈಲ್ವೆ ಹಳಿ ಬದಿಯ ಸ್ವಚ್ಛತಾ ಕಾರ್ಯ ಪರಿಶೀಲಿಸಿದ ಜಿಬಿಎ ಆಯುಕ್ತ ಮಹೇಶ್ವರ್ ರಾವ್
ಬೆಂಗಳೂರು, 25 ಆಗಸ್ಟ್ (ಹಿ.ಸ.): ಆ್ಯಂಕರ್:ನಗರದಾದ್ಯಂತ ನಡೆಯುತ್ತಿರುವ ‘ತ್ಯಾಜ್ಯ ಮುಕ್ತ ಬೆಂಗಳೂರು’ ಅಭಿಯಾನದ ಭಾಗವಾಗಿ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ರೈಲ್ವೆ ಹಳಿ ಬದಿಯ ವಿವಿಧ ಪ್ರದೇಶಗಳನ್ನು ಪರಿಶೀಲಿಸಿ, ಸ್ವಚ್ಛತಾ ಕಾರ್ಯಗಳನ್ನು ನಿರಂತರವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚ
ಪರಿಶೀಲನೆ


ಬೆಂಗಳೂರು, 25 ಆಗಸ್ಟ್ (ಹಿ.ಸ.):

ಆ್ಯಂಕರ್:ನಗರದಾದ್ಯಂತ ನಡೆಯುತ್ತಿರುವ ‘ತ್ಯಾಜ್ಯ ಮುಕ್ತ ಬೆಂಗಳೂರು’ ಅಭಿಯಾನದ ಭಾಗವಾಗಿ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ರೈಲ್ವೆ ಹಳಿ ಬದಿಯ ವಿವಿಧ ಪ್ರದೇಶಗಳನ್ನು ಪರಿಶೀಲಿಸಿ, ಸ್ವಚ್ಛತಾ ಕಾರ್ಯಗಳನ್ನು ನಿರಂತರವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ರೈಲ್ವೆ ಹಳಿ ಬದಿಯಲ್ಲಿ ಸುರಿದಿರುವ ಕಟ್ಟಡ ನಿರ್ಮಾಣ ಮತ್ತು ಧ್ವಂಸ ತ್ಯಾಜ್ಯವನ್ನು ತೆರವುಗೊಳಿಸಿ, ಮತ್ತೆ ತ್ಯಾಜ್ಯ ಸುರಿಯದಂತೆ ಸೂಕ್ತ ಸ್ಥಳಗಳಲ್ಲಿ ಬೇಲಿ ಅಳವಡಿಸಬೇಕು. ಸ್ವಯಂಸೇವಾ ಸಂಸ್ಥೆಗಳ ಸಹಯೋಗದಲ್ಲಿ ಹಳಿ ಬದಿಯ ಪ್ರದೇಶಗಳನ್ನು ಸ್ವಚ್ಛಗೊಳಿಸಿ, ಸುಂದರೀಕರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಅನಗತ್ಯವಾಗಿ ಬೆಳೆದಿರುವ ಪೊದೆ, ಗಿಡಗಂಟಿಗಳನ್ನು ತೆರವುಗೊಳಿಸುವುದು, ತ್ಯಾಜ್ಯ ವರ್ಗಾವಣೆಗಾಗಿ ನಿಗದಿತ ಸ್ಥಳ ಗುರುತಿಸುವುದು ಹಾಗೂ ರೈಲ್ವೆ ಇಲಾಖೆ, ಕೆ-ರೈಡ್, ಬಿಎಂಆರ್‌ಸಿಎಲ್ ಮತ್ತು ನಗರ ನಿಗಮಗಳೊಂದಿಗೆ ಸಮನ್ವಯ ಸಾಧಿಸಿ ಸಮಗ್ರ ಸ್ವಚ್ಛತಾ ಕಾರ್ಯ ಕೈಗೊಳ್ಳುವಂತೆ ಸೂಚಿಸಿದರು.

ಬೆನ್ನಿಗಾನಹಳ್ಳಿ ಕೆರೆಯ ಸುತ್ತಮುತ್ತಲಿನ ಚರಂಡಿಗಳನ್ನು ಸ್ವಚ್ಛಗೊಳಿಸಿ ಹೂಳೆತ್ತುವ ಕಾರ್ಯವನ್ನು ಕೈಗೊಳ್ಳಬೇಕು. ಈಗಾಗಲೇ ಪೂರ್ಣಗೊಂಡಿರುವ ಜಕ್ಕೂರು ರೈಲ್ವೆ ಮೇಲ್ಸೇತುವೆಯನ್ನು ಸಾರ್ವಜನಿಕ ಬಳಕೆಗೆ ಶೀಘ್ರ ತೆರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸ್ವಚ್ಛತೆ ಕಾಪಾಡದ ಖಾಲಿ ನಿವೇಶನಗಳ ಮಾಲೀಕರಿಗೆ ನೋಟಿಸ್ ಜಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಮಹೇಶ್ವರ್ ರಾವ್, ಸ್ವಚ್ಛ, ಹಸಿರು ಮತ್ತು ತ್ಯಾಜ್ಯಮುಕ್ತ ಬೆಂಗಳೂರಿಗಾಗಿ ಎಲ್ಲ ಇಲಾಖೆಗಳು ಹಾಗೂ ಸಂಬಂಧಪಟ್ಟ ಸಂಸ್ಥೆಗಳು ನಿರಂತರವಾಗಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande