ಸಂಡೂರು : ಆಗಸ್ಟ್ 27ರಂದು ಗೊಲ್ಲರಹಟ್ಟಿಗಳಲ್ಲಿ ಮಕ್ಕಳ ಹಕ್ಕುಗಳ ಜಾಗೃತಿ
ಬಳ್ಳಾರಿ, 26 ಆಗಸ್ಟ್ (ಹಿ.ಸ.) ಆ್ಯಂಕರ್ : ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಸಂಡೂರು ತಾಲೂಕಿನ ವಿವಿಧ ಗೊಲ್ಲರಹಟ್ಟಿ ಗ್ರಾಮಗಳಲ್ಲಿ ಆಗಸ್ಟ್ 27 ರಂದು ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಕಲ್ಯಾಣಕ್ಕೆ ಸಂಬಂಧಿಸಿದಂತೆ ಸಮಗ್ರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷ
ಸಂಡೂರು : ಆಗಸ್ಟ್ 27ರಂದು ಗೊಲ್ಲರಹಟ್ಟಿಗಳಲ್ಲಿ ಮಕ್ಕಳ ಹಕ್ಕುಗಳ  ಜಾಗೃತಿ


ಬಳ್ಳಾರಿ, 26 ಆಗಸ್ಟ್ (ಹಿ.ಸ.)

ಆ್ಯಂಕರ್ : ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಸಂಡೂರು ತಾಲೂಕಿನ ವಿವಿಧ ಗೊಲ್ಲರಹಟ್ಟಿ ಗ್ರಾಮಗಳಲ್ಲಿ ಆಗಸ್ಟ್ 27 ರಂದು ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಕಲ್ಯಾಣಕ್ಕೆ ಸಂಬಂಧಿಸಿದಂತೆ ಸಮಗ್ರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಮಕ್ಕಳ ಮೇಲಾಗುವ ದೌರ್ಜನ್ಯ ತಡೆ, ಬಾಲ್ಯವಿವಾಹ ಹಾಗೂ ಬಾಲಗರ್ಭಿಣಿ ಪಿಡುಗಿನ ವಿರುದ್ಧ ಕಾನೂನಾತ್ಮಕ ಮಾಹಿತಿ, ಪೋಕ್ಸೊ ಕಾಯ್ದೆ ಕುರಿತ ಮುನ್ನೆಚ್ಚರಿಕೆ ಹಾಗೂ ಅರಿವು, ಹೆಣ್ಣು ಮಕ್ಕಳ ಸಬಲೀಕರಣಕ್ಕಾಗಿ ‘ಬೇಟಿ ಬಚಾವೋ ಬೇಟಿ ಪಢಾವೋ' ಯೋಜನೆಯ ಮಹತ್ವದ ಅರಿವು ಮೂಡಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande