
ಬೆಂಗಳೂರು, 26 ಆಗಸ್ಟ್ (ಹಿ.ಸ.):
ಆ್ಯಂಕರ್:
ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬುಧವಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಕುರಿತು ಪಕ್ಷದ ಶಾಸಕರು ಹಾಗೂ ಹಿಂದಿನ ಚುನಾವಣೆಯಲ್ಲಿ ಪರಾಜಿತ ಅಭ್ಯರ್ಥಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು.
ಸಭೆಯಲ್ಲಿ ಬೆಂಗಳೂರಿನ ಅಭಿವೃದ್ಧಿ, ವಿವಿಧ ಕ್ಷೇತ್ರಗಳಲ್ಲಿನ ಸಮಸ್ಯೆಗಳು ಹಾಗೂ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಚರ್ಚೆ ನಡೆಯಿತು.
ಸಚಿವರಾದ ಕೃಷ್ಣಬೈರೇಗೌಡ, ಬಿ. ಸುರೇಶ್, ಕೆ.ಹೆಚ್. ಮುನಿಯಪ್ಪ, ರಿಜ್ವಾನ್ ಅರ್ಷದ್, ಕೆಪಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಹಾಲಿ ಹಾಗೂ ಮಾಜಿ ಶಾಸಕರು ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.