
ಬೀದರ್, 26 ಆಗಸ್ಟ್ (ಹಿ.ಸ.):
ಆ್ಯಂಕರ್:ಬೀದರ್ ನಗರದಲ್ಲಿ ರೆಡ್ಡಿ ಸಮುದಾಯದ ವತಿಯಿಂದ ನೂತನವಾಗಿ ನಿರ್ಮಿಸಲಾದ ಹೇಮ–ವೇಮ ಸಮುದಾಯ ಭವನದ ಉದ್ಘಾಟನಾ ಸಮಾರಂಭದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಭಾಗವಹಿಸಿ ಮಾತನಾಡಿದರು.
ಸಮಾಜದ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಸಮುದಾಯ ಭವನವು ಮತ್ತಷ್ಟು ಬಲ ನೀಡಲಿದೆ ಎಂದು ಈಶ್ವರ ಖಂಡ್ರೆ ಆಶಯ ವ್ಯಕ್ತಪಡಿಸಿದರು.
ಪೂಜ್ಯ ಶ್ರೀ ಶ್ರೀ ಶ್ರೀ ವೇಮನಾನಂದ ಮಹಾಸ್ವಾಮಿಗಳು ಹಾಗೂ ಪೂಜ್ಯ ಶ್ರೀ ಮಂತ್ರ ಮಹರ್ಷಿ ಡಾ. ಎನ್.ಬಿ. ರೆಡ್ಡಿ ಗುರುಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಿತು. ಸಚಿವ ರಾಮಲಿಂಗಾ ರೆಡ್ಡಿ, ಮಾಜಿ ಸಚಿವ ಹಾಗೂ ಶಾಸಕ ಹೆಚ್.ಕೆ. ಪಾಟೀಲ, ಮಾಜಿ ಸಚಿವ ರಾಜಶೇಖರ ಪಾಟೀಲ, ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ, ಮಾಜಿ ವಿಧಾನ ಪರಿಷತ್ ಸದಸ್ಯರಾದ ವಿಜಯ್ ಸಿಂಗ್, ಅರವಿಂದ ಅರಳಿ ಸೇರಿದಂತೆ ಹಲವು ಗಣ್ಯರು ಹಾಗೂ ಸಮಾಜದ ಹಿರಿಯ ಮುಖಂಡರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.