ಆಗಸ್ಟ್ 29ರಂದು ಉದ್ಯೋಗ ನೇರ ಸಂದರ್ಶನ
ಶಿವಮೊಗ್ಗ, 26 ಆಗಸ್ಟ್ (ಹಿ.ಸ.): ಆ್ಯಂಕರ್: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್ 29ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗ ನೇರ ಸಂದರ್ಶನ ಆಯೋಜಿಸಲಾಗಿದೆ. ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ವಿವಿಧ ಖಾಲಿ ಹುದ್ದೆಗಳ ನೇಮಕಾತಿ ನಡೆಯಲಿದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿ
ಆಗಸ್ಟ್ 29ರಂದು ಉದ್ಯೋಗ ನೇರ ಸಂದರ್ಶನ


ಶಿವಮೊಗ್ಗ, 26 ಆಗಸ್ಟ್ (ಹಿ.ಸ.):

ಆ್ಯಂಕರ್:

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್ 29ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗ ನೇರ ಸಂದರ್ಶನ ಆಯೋಜಿಸಲಾಗಿದೆ.

ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ವಿವಿಧ ಖಾಲಿ ಹುದ್ದೆಗಳ ನೇಮಕಾತಿ ನಡೆಯಲಿದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಅಥವಾ ಯಾವುದೇ ಪದವಿ ತೇರ್ಗಡೆಯಾಗಿರುವ 18ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ಆಸಕ್ತ ಅಭ್ಯರ್ಥಿಗಳು ಬಯೋಡೇಟಾ ಹಾಗೂ ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಹಾಜರಾಗಬೇಕು. ಸಂದರ್ಶನಕ್ಕೆ ಉಚಿತ ಪ್ರವೇಶವಿದ್ದು, ಶಿವಮೊಗ್ಗದ ಸಾಗರ ರಸ್ತೆಯ ಪಂಪಾನಗರ 2ನೇ ಕ್ರಾಸ್‌ನ ಗುತ್ಯಪ್ಪ ಕಾಲೋನಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ 9380663606 ಅಥವಾ 9108235132 ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande