ಈದ್-ಎ-ಮಿಲಾದ್: ಮಲ್ಲಿಕಾರ್ಜುನ ಖರ್ಗೆ ಶುಭಾಶಯ
ನವದೆಹಲಿ, 26 ಆಗಸ್ಟ್ (ಹಿ.ಸ.): ಆ್ಯಂಕರ್: ಈದ್-ಎ-ಮಿಲಾದ್-ಉನ್-ನಬಿ ಪವಿತ್ರ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ‘ಎಕ್ಸ್’ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಪ್ರವಾದಿ ಮುಹಮ್ಮದ್ ಅವರ ಜೀವನ ಮತ್ತು ಬೋಧನೆಗಳು ಮಾನವೀಯತೆ, ಕರುಣೆ,
ಖರ್ಗೆ ಎಕ್ಸನಲ್ಲಿ ಹಂಚಿಕೊಂಡಿರುವ ಪೋಟೋ


ನವದೆಹಲಿ, 26 ಆಗಸ್ಟ್ (ಹಿ.ಸ.):

ಆ್ಯಂಕರ್:

ಈದ್-ಎ-ಮಿಲಾದ್-ಉನ್-ನಬಿ ಪವಿತ್ರ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.

‘ಎಕ್ಸ್’ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಪ್ರವಾದಿ ಮುಹಮ್ಮದ್ ಅವರ ಜೀವನ ಮತ್ತು ಬೋಧನೆಗಳು ಮಾನವೀಯತೆ, ಕರುಣೆ, ಶಾಂತಿ ಹಾಗೂ ನ್ಯಾಯದ ಶಾಶ್ವತ ಮೌಲ್ಯಗಳನ್ನು ನೆನಪಿಸುತ್ತವೆ ಎಂದು ಹೇಳಿದ್ದಾರೆ.

ಈ ಪವಿತ್ರ ಸಂದರ್ಭವು ಸಹೋದರತ್ವದ ಬಂಧವನ್ನು ಮತ್ತಷ್ಟು ಬಲಪಡಿಸಲಿ ಹಾಗೂ ಪರಸ್ಪರ ಗೌರವ ಮತ್ತು ಸೌಹಾರ್ದತೆಯ ಆಧಾರದ ಮೇಲೆ ಸಮಾಜ ನಿರ್ಮಿಸಲು ಎಲ್ಲರನ್ನೂ ಪ್ರೇರೇಪಿಸಲಿ ಎಂದು ಖರ್ಗೆ ಆಶಿಸಿದ್ದಾರೆ.

ವೈವಿಧ್ಯತೆಯಲ್ಲಿ ಏಕತೆಯನ್ನು ಹೊಂದಿರುವ ದೇಶವನ್ನು ಒಗ್ಗೂಡಿಸುವ ಸಾಮರಸ್ಯದ ಮೌಲ್ಯಗಳು ಮತ್ತಷ್ಟು ಬಲಗೊಳ್ಳಲಿ ಎಂದು ಹಾರೈಸಿರುವ ಅವರು, ಎಲ್ಲರಿಗೂ ಈದ್ ಮುಬಾರಕ್ ಎಂದು ಶುಭ ಕೋರಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande