ಅಂತಾರಾಷ್ಟ್ರೀಯ ವ್ಯಾಪಾರ ಮೇಳ:ಕುಶಲಕರ್ಮಿಗಳಿಗೆ ಆಹ್ವಾನ
ಗದಗ, 26 ಆಗಸ್ಟ್ (ಹಿ.ಸ.) ಆ್ಯಂಕರ್:- ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರದ ವತಿಯಿಂದ ನವದೆಹಲಿಯ ಭಾರತ್ ಮಂಟಪದಲ್ಲಿ ನವೆಂಬರ್ 14ರಿಂದ 27ರವರೆಗೆ 45ನೇ ಆವೃತ್ತಿಯ ಭಾರತ ಅಂತಾರಾಷ್ಟ್ರೀಯ ವ್ಯಾಪಾರ ಮೇಳ 2026 ಆಯೋಜಿಸಲಾಗುತ್ತಿದೆ. ದೇಶದ ವಿವಿಧ ಭಾಗಗಳ ಉದ್ಯಮಿಗಳು, ಕುಶಲಕರ್ಮಿಗಳು ಹಾಗೂ ಉತ್ಪಾ
ಫೋಟೋ


ಗದಗ, 26 ಆಗಸ್ಟ್ (ಹಿ.ಸ.)

ಆ್ಯಂಕರ್:- ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರದ ವತಿಯಿಂದ ನವದೆಹಲಿಯ ಭಾರತ್ ಮಂಟಪದಲ್ಲಿ ನವೆಂಬರ್ 14ರಿಂದ 27ರವರೆಗೆ 45ನೇ ಆವೃತ್ತಿಯ ಭಾರತ ಅಂತಾರಾಷ್ಟ್ರೀಯ ವ್ಯಾಪಾರ ಮೇಳ 2026 ಆಯೋಜಿಸಲಾಗುತ್ತಿದೆ. ದೇಶದ ವಿವಿಧ ಭಾಗಗಳ ಉದ್ಯಮಿಗಳು, ಕುಶಲಕರ್ಮಿಗಳು ಹಾಗೂ ಉತ್ಪಾದಕರು ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡಲು ಈ ವ್ಯಾಪಾರ ಮೇಳ ಉತ್ತಮ ವೇದಿಕೆಯಾಗಲಿದೆ.

ವ್ಯಾಪಾರ ಮೇಳದಲ್ಲಿ ವಿವಿಧ ಕ್ಷೇತ್ರಗಳ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವುದರ ಜತೆಗೆ, ಉದ್ಯಮಿಗಳು ತಮ್ಮ ಉತ್ಪನ್ನಗಳನ್ನು ದೇಶದ ವಿವಿಧ ಭಾಗಗಳ ಗ್ರಾಹಕರು ಹಾಗೂ ವ್ಯಾಪಾರ ವಲಯಕ್ಕೆ ಪರಿಚಯಿಸಿಕೊಳ್ಳಲು ಅವಕಾಶ ದೊರೆಯಲಿದೆ. ವಿಶೇಷವಾಗಿ ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮಗಳು ಹಾಗೂ ಸ್ಥಳೀಯವಾಗಿ ವಿಶಿಷ್ಟ ಉತ್ಪನ್ನಗಳನ್ನು ತಯಾರಿಸುವ ಕುಶಲಕರ್ಮಿಗಳಿಗೆ ತಮ್ಮ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಕಂಡುಕೊಳ್ಳಲು ಇದು ಸಹಕಾರಿಯಾಗಲಿದೆ.

ಗದಗ ಜಿಲ್ಲೆಯ ಉತ್ತಮ ಕುಶಲಕರ್ಮಿಗಳು ಹಾಗೂ ಎಂಎಸ್ಎಂಇ ಘಟಕಗಳು ಈ ವ್ಯಾಪಾರ ಮೇಳದಲ್ಲಿ ಭಾಗವಹಿಸುವಂತೆ ಜಿಲ್ಲಾಡಳಿತ ಹಾಗೂ ಕೈಗಾರಿಕಾ ಇಲಾಖೆ ವತಿಯಿಂದ ಉತ್ತೇಜನ ನೀಡಲಾಗುತ್ತಿದೆ. ಜಿಲ್ಲೆಯಲ್ಲಿರುವ ವಿವಿಧ ರೀತಿಯ ವಿನೂತನ ಉತ್ಪನ್ನಗಳನ್ನು ರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಲು ಇದೊಂದು ಉತ್ತಮ ಅವಕಾಶವಾಗಿದ್ದು, ಅರ್ಹ ಹಾಗೂ ಆಸಕ್ತ ಉದ್ಯಮಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಲಾಗಿದೆ.

ಮಹಿಳಾ ಉದ್ಯಮಿಗಳಿಗೆ ವಿಶೇಷ ಅವಕಾಶ

ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವಿಶೇಷವಾಗಿ ಜಿಲ್ಲೆಯ ಮಹಿಳಾ ಉದ್ಯಮಿಗಳಿಂದಲೂ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸ್ವಂತ ಉದ್ಯಮ ನಡೆಸುತ್ತಿರುವ ಹಾಗೂ ಗುಣಮಟ್ಟದ ಉತ್ಪನ್ನಗಳನ್ನು ತಯಾರಿಸಿ ಮಾರುಕಟ್ಟೆ ಮಾಡುತ್ತಿರುವ ಮಹಿಳಾ ಉದ್ಯಮಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

ವ್ಯಾಪಾರ ಮೇಳದಲ್ಲಿ ಭಾಗವಹಿಸುವುದರಿಂದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟದ ಜತೆಗೆ ಹೊಸ ಗ್ರಾಹಕರು, ವ್ಯಾಪಾರ ಪಾಲುದಾರರು ಹಾಗೂ ಮಾರುಕಟ್ಟೆ ಅವಕಾಶಗಳನ್ನು ಕಂಡುಕೊಳ್ಳಲು ಸಹಕಾರಿಯಾಗಲಿದೆ. ಹೀಗಾಗಿ ಗದಗ ಜಿಲ್ಲೆಯ ಅರ್ಹ ಕುಶಲಕರ್ಮಿಗಳು ಮತ್ತು ಎಂಎಸ್ಎಂಇ ಉದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಸೆ.8 ಅರ್ಜಿ ಸಲ್ಲಿಕೆಗೆ ಕೊನೆಯ ದಿನ

ವ್ಯಾಪಾರ ಮೇಳದಲ್ಲಿ ಭಾಗವಹಿಸಲು ಆಸಕ್ತಿ ಹೊಂದಿರುವ ಉದ್ಯಮಿಗಳು ಹಾಗೂ ಕುಶಲಕರ್ಮಿಗಳು ಜಂಟಿ ನಿರ್ದೇಶಕರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಗದಗ ಇಲ್ಲಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದುಕೊಳ್ಳಬೇಕು. ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಸೆಪ್ಟೆಂಬರ್ 8ರೊಳಗಾಗಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ಮುನ್ನ ಅರ್ಹತೆ, ಅಗತ್ಯ ದಾಖಲೆಗಳು ಹಾಗೂ ವ್ಯಾಪಾರ ಮೇಳದಲ್ಲಿ ಭಾಗವಹಿಸುವ ಕುರಿತ ನಿಯಮಗಳ ಬಗ್ಗೆ ಜಿಲ್ಲಾ ಕೈಗಾರಿಕಾ ಕೇಂದ್ರದ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುವಂತೆ ತಿಳಿಸಲಾಗಿದೆ.

ಗದಗ ಜಿಲ್ಲೆಯ ಸ್ಥಳೀಯ ಉತ್ಪನ್ನಗಳು ಹಾಗೂ ಕುಶಲಕರ್ಮಿಗಳ ಕೌಶಲ್ಯವನ್ನು ರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಲು ದೊರೆತಿರುವ ಈ ಅವಕಾಶವನ್ನು ಅರ್ಹ ಉದ್ಯಮಿಗಳು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande