ಗದಗದಲ್ಲಿ ಆ.29ರಂದು ನೇರ ಸಂದರ್ಶನ
ಗದಗ, 26 ಆಗಸ್ಟ್ (ಹಿ.ಸ.) ಆ್ಯಂಕರ್:- ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗದಗ ವತಿಯಿಂದ ಉದ್ಯೋಗಾಕಾಂಕ್ಷಿಗಳಿಗಾಗಿ ಆಗಸ್ಟ್ 29ರಂದು ನೇರ ಸಂದರ್ಶನ ಆಯೋಜಿಸಲಾಗಿದೆ. ನಗರದ ಜಿಲ್ಲಾ ಆಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಕೊಠಡಿ ಸಂಖ್ಯೆ 215ರಲ್ಲಿ ಬೆಳಗ್ಗೆ 10 ಗಂಟೆಗೆ ನೇರ ಸಂದರ್ಶನ ನಡ
ಫೋಟೋ


ಗದಗ, 26 ಆಗಸ್ಟ್ (ಹಿ.ಸ.)

ಆ್ಯಂಕರ್:- ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗದಗ ವತಿಯಿಂದ ಉದ್ಯೋಗಾಕಾಂಕ್ಷಿಗಳಿಗಾಗಿ ಆಗಸ್ಟ್ 29ರಂದು ನೇರ ಸಂದರ್ಶನ ಆಯೋಜಿಸಲಾಗಿದೆ. ನಗರದ ಜಿಲ್ಲಾ ಆಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಕೊಠಡಿ ಸಂಖ್ಯೆ 215ರಲ್ಲಿ ಬೆಳಗ್ಗೆ 10 ಗಂಟೆಗೆ ನೇರ ಸಂದರ್ಶನ ನಡೆಯಲಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಬಸವಂತ ಪಿ.ಎನ್. ತಿಳಿಸಿದ್ದಾರೆ.

ನೇರ ಸಂದರ್ಶನದಲ್ಲಿ ಧಾರವಾಡದ ಯಶಸ್ವಿ ಗ್ರೂಪ್ ಕಂಪನಿ ಭಾಗವಹಿಸಲಿದ್ದು, ಐಟಿಐ, ಡಿಪ್ಲೊಮಾ ಹಾಗೂ ಎಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಅಪರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅವಕಾಶ ಕಲ್ಪಿಸಲಾಗಿದೆ. 18ರಿಂದ 28 ವರ್ಷದೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಧಾರವಾಡ, ಶಿರಸಿ ಹಾಗೂ ಹುಬ್ಬಳ್ಳಿ ಸ್ಥಳಗಳಲ್ಲಿ ಉದ್ಯೋಗಾವಕಾಶಗಳು ಲಭ್ಯವಿದ್ದು, ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಇಲಾಖೆ ತಿಳಿಸಿದೆ.

ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಅಂಕಪಟ್ಟಿಗಳ ಜೆರಾಕ್ಸ್ ಪ್ರತಿಗಳು, ಎರಡು ರೆಸ್ಯೂಮೆ ಅಥವಾ ಬಯೋಡಾಟಾ ಪ್ರತಿಗಳು ಹಾಗೂ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಯನ್ನು ತರಬೇಕು. ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ನೋಂದಣಿ ಕಡ್ಡಾಯವಾಗಿರುತ್ತದೆ.

ಅಲ್ಲದೇ ಯುವನಿಧಿ ಯೋಜನೆಯ ಫಲಾನುಭವಿಗಳು ಈ ನೇರ ಸಂದರ್ಶನದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ 6363330688 ಅಥವಾ 8904908565 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಬಸವಂತ ಪಿ.ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande