
ಬೆಂಗಳೂರು, 26 ಆಗಸ್ಟ್ (ಹಿ.ಸ.):
ಆ್ಯಂಕರ್:
ಮುಂಬರುವ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಡಾ. ರಾಧಾ ಮೋಹನ್ ದಾಸ್ ಅಗರ್ವಾಲ್ ಅವರ ನೇತೃತ್ವದಲ್ಲಿ ಪಕ್ಷದ ಕಚೇರಿಯಲ್ಲಿ ಬುಧವಾರ ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ ಚುನಾವಣಾ ಕಾರ್ಯತಂತ್ರ, ಮತದಾರರ ನೋಂದಣಿ ಅಭಿಯಾನ ಹಾಗೂ ಕ್ಷೇತ್ರಮಟ್ಟದಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ವಿಸ್ತೃತ ಚರ್ಚೆ ನಡೆಸಲಾಯಿತು.
ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಪ್ರೊ. ಎಂ. ನಾಗರಾಜ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್, ವಿಧಾನಸಭೆ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪ್ರೀತಮ್ ಜೆ. ಗೌಡ ಹಾಗೂ ಪಿ. ರಾಜೀವ್ ಸೇರಿದಂತೆ ಪಕ್ಷದ ಶಾಸಕರು ಮತ್ತು ಪ್ರಮುಖರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಪಕ್ಷದ ಕಾರ್ಯಕರ್ತರ ಪರಿಶ್ರಮದೊಂದಿಗೆ ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.