ಮೈಸೂರು ದಸರಾ ಮಹೋತ್ಸವಕ್ಕೆ ಮುನ್ನುಡಿ: ಗಜ ಪಯಣಕ್ಕೆ ಚಾಲನೆ
ಮೈಸೂರು, 26 ಆಗಸ್ಟ್ (ಹಿ.ಸ.): ಆ್ಯಂಕರ್:ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಮೊದಲ ಹೆಜ್ಜೆಯಾದ ‘ಗಜ ಪಯಣ–2026’ ಕಾರ್ಯಕ್ರಮಕ್ಕೆ ಹುಣಸೂರು ತಾಲೂಕಿನ ವೀರನ ಹೊಸಹಳ್ಳಿ ಗ್ರಾಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಬುಧವಾರ ಚಾಲನೆ ನೀಡಿದರು. ಕಾರ್ಯಕ್ರಮದಲ್ಲ
ಗಜ ಪಯಣಕ್ಕೆ ಚಾಲನೆ


ಮೈಸೂರು, 26 ಆಗಸ್ಟ್ (ಹಿ.ಸ.):

ಆ್ಯಂಕರ್:ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಮೊದಲ ಹೆಜ್ಜೆಯಾದ ‘ಗಜ ಪಯಣ–2026’ ಕಾರ್ಯಕ್ರಮಕ್ಕೆ ಹುಣಸೂರು ತಾಲೂಕಿನ ವೀರನ ಹೊಸಹಳ್ಳಿ ಗ್ರಾಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಬುಧವಾರ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ದಕ್ಷಿಣ ವಲಯದ ಐಜಿಪಿ ಡಾ. ಎಂ.ಬಿ. ಬೋರಲಿಂಗಯ್ಯ, ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಶಾಸಕರು, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

‘ಗಜ ಪಯಣ’ದೊಂದಿಗೆ ಮೈಸೂರು ದಸರಾ ಮಹೋತ್ಸವದ ಸಿದ್ಧತೆಗಳು ಅಧಿಕೃತವಾಗಿ ಆರಂಭಗೊಂಡಿದ್ದು, ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ ಆನೆಗಳ ತರಬೇತಿ ಹಾಗೂ ಸಿದ್ಧತಾ ಕಾರ್ಯಗಳಿಗೆ ಚಾಲನೆ ದೊರೆತಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande