ಶ್ರೀಕೃಷ್ಣ ಜಯಂತಿ ಆಚರಣೆಗೆ ಪೂರ್ವಭಾವಿ ಸಭೆ
ಗದಗ, 26 ಆಗಸ್ಟ್ (ಹಿ.ಸ.) ಆ್ಯಂಕರ್:- ಸರ್ಕಾರದ ಆದೇಶದನ್ವಯ ಪ್ರತಿವರ್ಷದಂತೆ ಈ ವರ್ಷವೂ ಸೆಪ್ಟೆಂಬರ್ 4ರಂದು ಶ್ರೀಕೃಷ್ಣ ಜಯಂತಿಯನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಯಂತಿ ಕಾರ್ಯಕ್ರಮದ ಸಿದ್ಧತೆ ಕುರಿತು ಚರ್ಚಿಸಲು ಆಗಸ್ಟ್ 27ರಂದು ಪೂರ್ವಭಾವಿ ಸಭೆ ಕರೆಯಲಾಗಿದೆ. ಆಗಸ್ಟ್ 27ರಂದು ಗುರುವ
ಫೋಟೋ


ಗದಗ, 26 ಆಗಸ್ಟ್ (ಹಿ.ಸ.)

ಆ್ಯಂಕರ್:- ಸರ್ಕಾರದ ಆದೇಶದನ್ವಯ ಪ್ರತಿವರ್ಷದಂತೆ ಈ ವರ್ಷವೂ ಸೆಪ್ಟೆಂಬರ್ 4ರಂದು ಶ್ರೀಕೃಷ್ಣ ಜಯಂತಿಯನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಯಂತಿ ಕಾರ್ಯಕ್ರಮದ ಸಿದ್ಧತೆ ಕುರಿತು ಚರ್ಚಿಸಲು ಆಗಸ್ಟ್ 27ರಂದು ಪೂರ್ವಭಾವಿ ಸಭೆ ಕರೆಯಲಾಗಿದೆ.

ಆಗಸ್ಟ್ 27ರಂದು ಗುರುವಾರ ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ಜರುಗಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಸವರಾಜ ವ್ಹಿ. ಬಳ್ಳಾರಿ ತಿಳಿಸಿದ್ದಾರೆ.

ಶ್ರೀಕೃಷ್ಣ ಜಯಂತಿಯನ್ನು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಹಾಗೂ ವ್ಯವಸ್ಥಿತವಾಗಿ ಆಚರಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಕಾರ್ಯಕ್ರಮದ ರೂಪುರೇಷೆ, ವಿವಿಧ ಇಲಾಖೆಗಳ ಸಮನ್ವಯ, ಅಗತ್ಯ ಸಿದ್ಧತೆಗಳು ಸೇರಿದಂತೆ ಜಯಂತಿ ಆಚರಣೆಗೆ ಸಂಬಂಧಿಸಿದ ವಿಷಯಗಳ ಕುರಿತು ಪೂರ್ವಭಾವಿ ಚರ್ಚೆ ನಡೆಯಲಿದೆ.

ಜಿಲ್ಲೆಯ ಸಂಬಂಧಿಸಿದ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಕಾರ್ಯಕ್ರಮದೊಂದಿಗೆ ಸಂಪರ್ಕ ಹೊಂದಿರುವವರು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡುವಂತೆ ಇಲಾಖೆ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande