
ಬೆಂಗಳೂರು, 27 ಆಗಸ್ಟ್ (ಹಿ.ಸ.):
ಆ್ಯಂಕರ್:ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನಿಲ್ ಕುಮಾರ್ ಅವರು ಶುಕ್ರವಾರ ಸಾರ್ವಜನಿಕರ ಅಹವಾಲುಗಳನ್ನು ನೇರವಾಗಿ ಸ್ವೀಕರಿಸಲಿದ್ದಾರೆ.
ಆ.28ರಂದು ಬೆಳಗ್ಗೆ 7ರಿಂದ 9ರವರೆಗೆ ನಡೆಯುವ ದೂರವಾಣಿ ಕಾರ್ಯಕ್ರಮದಲ್ಲಿ ನಾಗರಿಕರು ರಸ್ತೆ ಹಾಗೂ ಗುಂಡಿಗಳು, ಬೀದಿ ದೀಪಗಳು, ಘನತ್ಯಾಜ್ಯ ನಿರ್ವಹಣೆ, ಅಪಾಯಕಾರಿ ಮರ ಹಾಗೂ ಕೊಂಬೆಗಳು, ಸೊಳ್ಳೆ ನಿಯಂತ್ರಣ, ಬೀದಿ ನಾಯಿಗಳು, ಉದ್ಯಾನವನ ಮತ್ತು ಆಟದ ಮೈದಾನಗಳು, ಪಾದಚಾರಿ ಮಾರ್ಗದ ಒತ್ತುವರಿ, ಇ-ಖಾತಾ ಸೇವೆಗಳು, ಅನಧಿಕೃತ ಬ್ಯಾನರ್‌ಗಳು ಸೇರಿದಂತೆ ವಿವಿಧ ನಾಗರಿಕ ಸಮಸ್ಯೆಗಳನ್ನು ಆಯುಕ್ತರ ಗಮನಕ್ಕೆ ತರಬಹುದು.
ಸ್ವೀಕರಿಸಿದ ಎಲ್ಲ ದೂರುಗಳನ್ನು ಸಹಾಯ 2.0 ತಂತ್ರಾಂಶದಲ್ಲಿ ದಾಖಲಿಸಿ ಸಂಬಂಧಪಟ್ಟ ಇಲಾಖೆಗೆ ಕಳುಹಿಸಲಾಗುವುದು. ದೂರುಗಳ ವಿವರ ಹಾಗೂ ಪ್ರಗತಿಯನ್ನು ನಾಗರಿಕರಿಗೆ ಸಂದೇಶದ ಮೂಲಕ ತಿಳಿಸಲಾಗುತ್ತದೆ.
ಸಾರ್ವಜನಿಕರು 9480685705 ಮೊಬೈಲ್ ಅಥವಾ ವಾಟ್ಸ್‌ಆ್ಯಪ್ ಸಂಖ್ಯೆಗೆ, 080-22975936 / 080-23636671 ದೂರವಾಣಿ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಬಹುದು. ಸಹಾಯ 2.0 ಮೊಬೈಲ್ ಆ್ಯಪ್ ಮೂಲಕವೂ ದೂರು ದಾಖಲಿಸಲು ಅವಕಾಶವಿದೆ ಪ್ರಕಟಣೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.