ರಾಜ್ಯ ಸರಕಾರದಿಂದ ನೇಪಾಳ–ಟಿಬೆಟ್ನಲ್ಲಿ ಸಿಲುಕಿರುವ ಕನ್ನಡಿಗರ ಮಾಹಿತಿ ಸಂಗ್ರಹ
ಬೆಂಗಳೂರು, 27 ಆಗಸ್ಟ್ (ಹಿ.ಸ.): ಆ್ಯಂಕರ್:ನೇಪಾಳ–ಟಿಬೆಟ್ ಗಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಭವಿಸಿರುವ ಹಠಾತ್ ಪ್ರವಾಹ ಮತ್ತು ಸಂಚಾರ ವ್ಯತ್ಯಯದ ಹಿನ್ನೆಲೆಯಲ್ಲಿ, ನೇಪಾಳ ಹಾಗೂ ಟಿಬೆಟ್ ಸ್ವಾಯತ್ತ ಪ್ರದೇಶದಲ್ಲಿ ಸಿಲುಕಿರುವ ಕರ್ನಾಟಕದವರ ಮಾಹಿತಿಯನ್ನು ರಾಜ್ಯ ಸರ್ಕಾರ ಸಂಗ್ರಹಿಸುತ್ತಿದೆ.
ರಾಜ್ಯ ಸರಕಾರದಿಂದ ನೇಪಾಳ–ಟಿಬೆಟ್ನಲ್ಲಿ ಸಿಲುಕಿರುವ ಕನ್ನಡಿಗರ ಮಾಹಿತಿ ಸಂಗ್ರಹ


ಬೆಂಗಳೂರು, 27 ಆಗಸ್ಟ್ (ಹಿ.ಸ.):

ಆ್ಯಂಕರ್:ನೇಪಾಳ–ಟಿಬೆಟ್ ಗಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಭವಿಸಿರುವ ಹಠಾತ್ ಪ್ರವಾಹ ಮತ್ತು ಸಂಚಾರ ವ್ಯತ್ಯಯದ ಹಿನ್ನೆಲೆಯಲ್ಲಿ, ನೇಪಾಳ ಹಾಗೂ ಟಿಬೆಟ್ ಸ್ವಾಯತ್ತ ಪ್ರದೇಶದಲ್ಲಿ ಸಿಲುಕಿರುವ ಕರ್ನಾಟಕದವರ ಮಾಹಿತಿಯನ್ನು ರಾಜ್ಯ ಸರ್ಕಾರ ಸಂಗ್ರಹಿಸುತ್ತಿದೆ.

ನೇಪಾಳ ಅಥವಾ ಟಿಬೆಟ್‌ನಲ್ಲಿ ಸಿಲುಕಿರುವವರು, ಅವರ ಕುಟುಂಬಸ್ಥರು ಹಾಗೂ ಪ್ರವಾಸ ನಿರ್ವಾಹಕರು ಸಂಬಂಧಿತ ವಿವರಗಳನ್ನು ಗೂಗಲ್ ನಮೂನೆಯಲ್ಲಿ ದಾಖಲಿಸುವಂತೆ ಸರ್ಕಾರ ಮನವಿ ಮಾಡಿದೆ. ಈ ಮಾಹಿತಿಯ ಆಧಾರದ ಮೇಲೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ನೇಪಾಳದಲ್ಲಿರುವ ಭಾರತೀಯ ರಾಯಭಾರ ಕಚೇರಿ ಹಾಗೂ ಬೀಜಿಂಗ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಮನ್ವಯ ಸಾಧಿಸಿ ರಕ್ಷಣೆ, ಸ್ಥಳಾಂತರ ಹಾಗೂ ಅಗತ್ಯ ನೆರವು ಒದಗಿಸಲು ಕ್ರಮ ಕೈಗೊಳ್ಳಲಾಗುತ್ತದೆ.

ಮಾಹಿತಿ ನೀಡಲು ಗೂಗಲ್ ನಮೂನೆ:

https://docs.google.com/forms/d/1gnw8B8vaYknr0Y2Lkn_fpWubPnKI6a8C4Em7co1Shbk/edit

ತುರ್ತು ನೆರವು ಅಥವಾ ಹೆಚ್ಚಿನ ಮಾಹಿತಿಗಾಗಿ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ 1070 / 080-22253707 ಸಂಖ್ಯೆಗೆ ಸಂಪರ್ಕಿಸಬಹುದು. seockarnataka@gmail.comಗೆ ಇ-ಮೇಲ್ ಮೂಲಕವೂ ಮಾಹಿತಿ ನೀಡಬಹುದು ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ಪ್ರಕಟಣೆಯಲ್ಲಿ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande