ನಾನು ಪಕ್ಷದ ಶಿಸ್ತಿನ ಸಿಪಾಯಿ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ, 27 ಆಗಸ್ಟ್ (ಹಿ.ಸ.): ಆ್ಯಂಕರ್:ಸಚಿವ ಸಂಪುಟದಿಂದ ಹೊರಗುಳಿದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಪಕ್ಷದ ಹೈಕಮಾಂಡ್ ನಿರ್ಧಾರವನ್ನು ಸ್ವಾಗತಿಸುವುದಾಗಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಮೂರ
ಮಾಧ್ಯಮಗಳಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್


ಬೆಳಗಾವಿ, 27 ಆಗಸ್ಟ್ (ಹಿ.ಸ.):

ಆ್ಯಂಕರ್:ಸಚಿವ ಸಂಪುಟದಿಂದ ಹೊರಗುಳಿದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಪಕ್ಷದ ಹೈಕಮಾಂಡ್ ನಿರ್ಧಾರವನ್ನು ಸ್ವಾಗತಿಸುವುದಾಗಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಮೂರು ವರ್ಷಗಳ ಕಾಲ ಸಚಿವೆಯಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಸಲ್ಲಿಸಿದ ಅವರು, ಪಕ್ಷ ಮುಂದೆ ಯಾವುದೇ ಜವಾಬ್ದಾರಿ ನೀಡಿದರೂ ಪ್ರಾಮಾಣಿಕವಾಗಿ ನಿರ್ವಹಿಸುವುದಾಗಿ ಹೇಳಿದರು. “ನಾನು ಪಕ್ಷದ ಶಿಸ್ತಿನ ಸಿಪಾಯಿ. ಅವಕಾಶ ಕೊಟ್ಟರೂ, ಕೊಡದಿದ್ದರೂ ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡುತ್ತೇನೆ” ಎಂದರು.

ಸಚಿವ ಸ್ಥಾನ ಮುಂದುವರಿಸುವಂತೆ ತಾವು ಯಾರನ್ನೂ ಕೇಳಿಲ್ಲ. ರಾಜಕಾರಣದಲ್ಲಿ ಸ್ಥಾನಮಾನಗಳು ಬದಲಾಗುವುದು ಸಹಜ. ಹೈಕಮಾಂಡ್ ಸಾಕಷ್ಟು ಚಿಂತನೆ ನಡೆಸಿ ನಿರ್ಧಾರ ಕೈಗೊಳ್ಳುವಾಗ ಅದನ್ನು ಪ್ರಶ್ನಿಸುವುದು ಸರಿಯಲ್ಲ ಎಂದು ಹೇಳಿದರು.

ಮಹಿಳೆಯರಿಗೆ ಸಂಪುಟದಲ್ಲಿ ಪ್ರಾತಿನಿಧ್ಯ ಅಗತ್ಯ

ಮಹಿಳೆಯರಿಲ್ಲದ ಸಚಿವ ಸಂಪುಟ ಅಪೂರ್ಣವಾಗಿದ್ದು, ಸರ್ಕಾರದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ಇರಬೇಕು ಎಂದು ಹೆಬ್ಬಾಳಕರ್ ಪ್ರತಿಪಾದಿಸಿದರು. ಸಚಿವೆಯಾಗಿ ಮೂರು ವರ್ಷಗಳ ಕಾಲ ಕಾರ್ಯನಿರ್ವಹಿಸುವ ವೇಳೆ ಮಹಿಳೆಯರ ಸಮಸ್ಯೆಗಳನ್ನು ಹತ್ತಿರದಿಂದ ಕಂಡಿದ್ದೇನೆ. ಅವರ ಧ್ವನಿ ಸರ್ಕಾರದಲ್ಲಿ ಇರಬೇಕು ಎಂದರು.

ಮುಂದಿನ ದಿನಗಳಲ್ಲಿ ತಮ್ಮ ರಾಜಕೀಯ ಚಟುವಟಿಕೆಗಳನ್ನು ಬೆಳಗಾವಿಗೆ ಸೀಮಿತಗೊಳಿಸದೆ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆಯಲ್ಲಿ ತೊಡಗುವುದಾಗಿ ತಿಳಿಸಿದರು.

₹5 ಸಾವಿರ ಕೋಟಿ ಆರೋಪಕ್ಕೆ ದಾಖಲೆ ಕೇಳಿದ ಹೆಬ್ಬಾಳಕರ್

ತಮ್ಮ ವಿರುದ್ಧ ಕೇಳಿಬಂದಿರುವ ₹5 ಸಾವಿರ ಕೋಟಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಹಣಕಾಸು ಇಲಾಖೆ ಹಣ ಬಿಡುಗಡೆ ಮಾಡಿಲ್ಲ ಎಂಬುದನ್ನು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ಆರೋಪ ಮಾಡುವವರು ದಾಖಲೆಗಳೊಂದಿಗೆ ಮಾತನಾಡಬೇಕು. ಧೈರ್ಯವಿದ್ದರೆ ಮುಖಾಮುಖಿ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.

ರಾಜಕಾರಣದಲ್ಲಿ ಕೆಲವೊಮ್ಮೆ ಅಗ್ನಿಪರೀಕ್ಷೆ ಎದುರಾಗುತ್ತದೆ. ಅಂತಹ ಸಂದರ್ಭಗಳಲ್ಲಿ ತಾಳ್ಮೆ ಮತ್ತು ಶಿಸ್ತು ಕಾಯ್ದುಕೊಂಡರೆ ಮುಂದಿನ ದಿನಗಳಲ್ಲಿ ಅವಕಾಶಗಳು ದೊರೆಯುತ್ತವೆ. ಸಚಿವ ಸ್ಥಾನ ಬರುತ್ತದೆ, ಹೋಗುತ್ತದೆ; ಆದರೆ ಪಕ್ಷದ ಮೇಲಿನ ನಿಷ್ಠೆ ಹಾಗೂ ಜನರ ಮೇಲಿನ ಬದ್ಧತೆ ಮುಂದುವರಿಯಲಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande