
ನವದೆಹಲಿ, 27 ಆಗಸ್ಟ್(ಹಿ.ಸ.):
ಆ್ಯಂಕರ್:ಪ್ರವಾಹ ಪೀಡಿತ ನೇಪಾಳಕ್ಕೆ ಭಾರತವು 37.5 ಟನ್‌ಗಳಷ್ಟು ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ ಸಾಮಗ್ರಿ, ಔಷಧಿಗಳು ಹಾಗೂ ಆಹಾರ ಪ್ಯಾಕೆಟ್ಗಳ ಎರಡನೇ ಕಂತನ್ನು ಗುರುವಾರ ರವಾನಿಸಿದೆ.
ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದು, ನೇಪಾಳಕ್ಕೆ ಪರಿಹಾರ ಸಾಮಗ್ರಿಗಳನ್ನು ಹೊತ್ತ ಎರಡನೇ ವಿಮಾನ ಇದೀಗ ಪ್ರಯಾಣ ಬೆಳೆಸಿದೆ ಎಂದು ತಿಳಿಸಿದ್ದಾರೆ. ನೇಪಾಳದ ಅಧಿಕಾರಿಗಳೊಂದಿಗೆ ಭಾರತ ನಿರಂತರ ಹಾಗೂ ನಿಕಟ ಸಂಪರ್ಕದಲ್ಲಿದ್ದು, ಪರಿಹಾರ ಕಾರ್ಯಗಳಿಗೆ ಸಂಪೂರ್ಣ ಸಹಕಾರ ಮುಂದುವರಿಸಲಿದೆ ಎಂದು ಹೇಳಿದ್ದಾರೆ.
ನೇಪಾಳದ ರಸುವಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೋಟೇಕೋಶಿ ನದಿಯಲ್ಲಿ ಬುಧವಾರ ಬೆಳಗ್ಗೆ ಏಕಾಏಕಿ ಉಂಟಾದ ಭೀಕರ ಪ್ರವಾಹದಿಂದ ಕನಿಷ್ಠ 157 ಮಂದಿ ಮೃತಪಟ್ಟಿದ್ದು, ಸುಮಾರು 700 ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಲ್ಲಿ ವಿದೇಶಿ ಪ್ರಜೆಗಳು ಹಾಗೂ ಭದ್ರತಾ ಸಿಬ್ಬಂದಿಯೂ ಸೇರಿದ್ದಾರೆ. ಪ್ರವಾಹದಿಂದ ಮೂರು ಜಿಲ್ಲೆಗಳಲ್ಲಿ ಭಾರಿ ಹಾನಿ ಸಂಭವಿಸಿದೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.