ದೆಹಲಿಯಲ್ಲಿ ಸಿಎಂ ಬೀದಿ ನಾಟಕ, ಕೆಪಿಎಸ್ಸಿ ಅಕ್ರಮದಲ್ಲಿ ದಿವ್ಯ ಮೌನ: ಆರ್. ಅಶೋಕ್
ಬೆಂಗಳೂರು, 27 ಆಗಸ್ಟ್ (ಹಿ.ಸ.): ಆ್ಯಂಕರ್: ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದಂತೆ ಕೆಪಿಎಸ್‌ಸಿ ಸ್ಟ್ರಾಂಗ್ ರೂಮ್‌ನ ಸಿಸಿಟಿವಿ ದೃಶ್ಯಾವಳಿಗಳನ್ನು ಅಳಿಸಲಾಗಿದೆ ಹಾಗೂ ಪರೀಕ್ಷೆಯ ಒಎಂಆರ್ ಪ್ರತಿಗಳನ್ನು ಸಂಗ್ರಹಿಸಿದ್ದ ಹಾರ್ಡ್ ಡಿಸ್ಕ್ ಪತ್ತೆಯಾಗುತ್ತಿಲ್ಲ ಎಂಬ ವರದಿಗಳ ಹಿನ್ನೆಲೆಯ
ಅಶೋಕ ಸಂಗ್ರಹ ಚಿತ್ರ


ಬೆಂಗಳೂರು, 27 ಆಗಸ್ಟ್ (ಹಿ.ಸ.):

ಆ್ಯಂಕರ್:

ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದಂತೆ ಕೆಪಿಎಸ್‌ಸಿ ಸ್ಟ್ರಾಂಗ್ ರೂಮ್‌ನ ಸಿಸಿಟಿವಿ ದೃಶ್ಯಾವಳಿಗಳನ್ನು ಅಳಿಸಲಾಗಿದೆ ಹಾಗೂ ಪರೀಕ್ಷೆಯ ಒಎಂಆರ್ ಪ್ರತಿಗಳನ್ನು ಸಂಗ್ರಹಿಸಿದ್ದ ಹಾರ್ಡ್ ಡಿಸ್ಕ್ ಪತ್ತೆಯಾಗುತ್ತಿಲ್ಲ ಎಂಬ ವರದಿಗಳ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ನೀಡಿರುವ ಅವರು, ಪರೀಕ್ಷೆಯ ಪಾರದರ್ಶಕತೆಗಾಗಿ ಅಳವಡಿಸಿದ್ದ ಸಿಸಿಟಿವಿ ದೃಶ್ಯಾವಳಿಗಳೇ ಇಲ್ಲದಿರುವುದು ಹಾಗೂ ಒಎಂಆರ್ ದಾಖಲೆಗಳ ಹಾರ್ಡ್ ಡಿಸ್ಕ್ ನಾಪತ್ತೆಯಾಗಿರುವುದು ಆತಂಕಕಾರಿ ಸಂಗತಿ ಎಂದು ಹೇಳಿದ್ದಾರೆ.

“ಸಾಕ್ಷ್ಯಗಳನ್ನು ಯಾರು, ಯಾರನ್ನು ರಕ್ಷಿಸಲು ನಾಶ ಮಾಡಿದ್ದಾರೆ?” ಎಂದು ಪ್ರಶ್ನಿಸಿರುವ ಅಶೋಕ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಪ್ರತಿಭಟನೆ ನಡೆಸುವ ಉತ್ಸಾಹವನ್ನು ಕರ್ನಾಟಕದ ಯುವಕರ ಭವಿಷ್ಯದ ವಿಚಾರದಲ್ಲಿ ಏಕೆ ತೋರಿಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಕೆಪಿಎಸ್‌ಸಿ ನೇಮಕಾತಿ ಅಕ್ರಮದ ತನಿಖೆ ಮುಂದುವರಿದಂತೆ ಒಂದೊಂದೇ ದಾಖಲೆಗಳು ನಾಪತ್ತೆಯಾಗುತ್ತಿರುವುದು ಕೇವಲ ನಿರ್ಲಕ್ಷ್ಯವೇ ಅಥವಾ ವ್ಯವಸ್ಥಿತವಾಗಿ ಸತ್ಯವನ್ನು ಮುಚ್ಚಿಹಾಕುವ ಪ್ರಯತ್ನವೇ ಎಂಬುದನ್ನು ಮುಖ್ಯಮಂತ್ರಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಉದ್ಯೋಗಕ್ಕಾಗಿ ವರ್ಷಗಳ ಕಾಲ ಕಷ್ಟಪಟ್ಟು ಓದುತ್ತಿರುವ ಕರ್ನಾಟಕದ ಯುವಕರ ಭವಿಷ್ಯದ ಬಗ್ಗೆ ಸರ್ಕಾರ ಇಷ್ಟೊಂದು ನಿರ್ಲಕ್ಷ್ಯ ವಹಿಸಿರುವುದು ಏಕೆ ಎಂದು ಅಶೋಕ್ ಪ್ರಶ್ನಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande