
ಬೆಂಗಳೂರು, 27 ಆಗಸ್ಟ್ (ಹಿ.ಸ.):
ಆ್ಯಂಕರ್:
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣದಲ್ಲಿ ಸಚಿವ ಬಿ. ನಾಗೇಂದ್ರ ವಿರುದ್ಧದ ಹೋರಾಟ ಮುಂದುವರಿಸಲಿದ್ದು, ಅವರು ರಾಜೀನಾಮೆ ನೀಡುವುದು ಖಚಿತ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ಕುರಿತು ಸಿಬಿಐ ಹಾಗೂ ಜಾರಿ ನಿರ್ದೇಶನಾಲಯದ ತನಿಖೆಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ. ಹಗರಣ ನಡೆದಿಲ್ಲವೆಂದಾದರೆ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದು ಏಕೆ ಎಂಬುದಕ್ಕೆ ಸರ್ಕಾರ ಉತ್ತರಿಸಬೇಕು ಎಂದರು.
ಹಗರಣದ ಮೂಲ ಸೂತ್ರಧಾರರು ಯಾರು ಎಂಬುದು ತನಿಖೆಯಿಂದ ಬಯಲಾಗಲಿದೆ. ದಲಿತರ ಹಣದ ದುರ್ಬಳಕೆ ಮಾಡಿದವರು ಸಚಿವ ಸಂಪುಟದಲ್ಲಿರಬಾರದು ಎಂಬುದು ನಮ್ಮ ನಿಲುವು ಎಂದರು.
ಒಂದು ವಾರದೊಳಗೆ ಸಚಿವ ನಾಗೇಂದ್ರ ಅವರ ರಾಜೀನಾಮೆ ಕುರಿತು ತೀರ್ಮಾನವಾಗದಿದ್ದರೆ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.
ಬಿಡದಿ ಟೌನ್‌ಶಿಪ್, ನೈಸ್ ಸೇರಿದಂತೆ ವಿವಿಧ ವಿಷಯಗಳ ಕುರಿತು ಮುಂದಿನ ವಿಧಾನಮಂಡಲ ಅಧಿವೇಶನದಲ್ಲೂ ಹೋರಾಟ ಮುಂದುವರಿಸಲಾಗುವುದು ಎಂದು ಆರ್.ಅಶೋಕ ತಿಳಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.