
ಬಳ್ಳಾರಿ, 27 ಆಗಸ್ಟ್ (ಹಿ.ಸ.):
ಆ್ಯಂಕರ್ : ನೇಪಾಳದಲ್ಲಿ ಸಂಭವಿಸಿದ ದಿಢೀರ್ ಪ್ರವಾಹ ಹಾಗೂ ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾಡಳಿತವು ತುರ್ತು ಸಹಾಯವಾಣಿ ಕೇಂದ್ರಗಳನ್ನು ತೆರೆದಿದ್ದು, ಸಾರ್ವಜನಿಕರ ನೆರವಿಗೆ ಮುಂದಾಗಿದೆ.
ಪ್ರವಾಹ ದುರಂತದಲ್ಲಿ ಹಲವಾರು ಮಂದಿ ಸಾವನ್ನಪ್ಪಿದ್ದು, ನೂರಾರು ಜನ ನಾಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಕೇಂದ್ರ ಗೃಹ ಸಚಿವಾಲಯ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ ಬಳ್ಳಾರಿ ಜಿಲ್ಲಾಡಳಿತವೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.
ಬಳ್ಳಾರಿ ಜಿಲ್ಲೆಯ ಮೂಲದ ನಾಗರಿಕರು ಅಥವಾ ಪ್ರವಾಸಿಗರು ನೇಪಾಳದಲ್ಲಿ ಸಿಲುಕಿ ಸಂಪರ್ಕಕ್ಕೆ ಸಿಗದೆ ಇದ್ದಲ್ಲಿ, ಅವರ ಪೂರ್ಣ ವಿವರಗಳನ್ನು ತಕ್ಷಣವೇ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಒದಗಿಸುವಂತೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
*ಸಂಪರ್ಕಿಸಬೇಕಾದ ಸಹಾಯವಾಣಿ ಸಂಖ್ಯೆಗಳು:*
ಬಳ್ಳಾರಿ ಜಿಲ್ಲಾ ವಿಪತ್ತು ಸಹಾಯವಾಣಿ ಕೇಂದ್ರ: 08392-277100, 8277888866 ಅಥವಾ 1077
ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ : 080-22253707 ಅಥವಾ 1070
ಭಾರತೀಯ ರಾಯಭಾರ ಕಚೇರಿ (ತುರ್ತು ಕರೆ ಮತ್ತು ವಾಟ್ಸಾಪ್): +977 9851316807, +977 9709107500, +977 9810326117
ನೇಪಾಳದಲ್ಲಿ ಯಾರಾದರೂ ನಾಪತ್ತೆಯಾಗಿದ್ದಾರೆಂದು ಶಂಕಿಸಲಾಗಿದ್ದರೆ, ಅವರ ಹೆಸರು, ಕೊನೆಯದಾಗಿ ಸಂಪರ್ಕಿಸಿದ ಸ್ಥಳ/ಸಮಯ ಮತ್ತು ಖಾಯಂ ವಿಳಾಸದ ವಿವರಗಳನ್ನು ರಾಜ್ಯ ಸರ್ಕಾರ ಒದಗಿಸಿರುವ ಅಧಿಕೃತ ಗೂಗಲ್ ಫಾರ್ಮ್ (https://docs.google.com/forms/d/1gnw8B8vaYknr0Y2LknfbWubpnKl6a8C4Em7co1Shbk/edit) ಲಿಂಕ್ ಮೂಲಕವೂ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್