ವಿವೇಕಾನಂದ ಕೇಂದ್ರದ ಅಧ್ಯಕ್ಷರಾಗಿದ್ದ ಬಾಲಕೃಷ್ಣ ಅವರ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
ನವದೆಹಲಿ, 27 ಆಗಸ್ಟ್ (ಹಿ.ಸ.): ಆ್ಯಂಕರ್:ವಿವೇಕಾನಂದ ಕೇಂದ್ರದ ಅಖಿಲ ಭಾರತ ಅಧ್ಯಕ್ಷರಾಗಿದ್ದ ಎ. ಬಾಲಕೃಷ್ಣ ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎಕ್ಸ್‌ನಲ್ಲಿ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ, ಬಾಲಕೃಷ್ಣ ಅವರು ಐದು ದಶಕಗಳಿಗೂ ಹೆಚ್ಚು ಕಾಲ ಸ್
ಪ್ರಧಾನಮಂತ್ರಿ ನರೇಂದ್ರ ಮೋದಿ ಎಕ್ಸನಲ್ಲಿ ಹಂಚಿಕೊಂಡಿರುವ ಚಿತ್ರ


ನವದೆಹಲಿ, 27 ಆಗಸ್ಟ್ (ಹಿ.ಸ.):

ಆ್ಯಂಕರ್:ವಿವೇಕಾನಂದ ಕೇಂದ್ರದ ಅಖಿಲ ಭಾರತ ಅಧ್ಯಕ್ಷರಾಗಿದ್ದ ಎ. ಬಾಲಕೃಷ್ಣ ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಎಕ್ಸ್‌ನಲ್ಲಿ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ, ಬಾಲಕೃಷ್ಣ ಅವರು ಐದು ದಶಕಗಳಿಗೂ ಹೆಚ್ಚು ಕಾಲ ಸ್ವಾಮಿ ವಿವೇಕಾನಂದರ ಆದರ್ಶಗಳಿಗೆ ಹಾಗೂ ಸಮಾಜ ಸೇವೆಗೆ ತಮ್ಮ ಜೀವನವನ್ನು ಸಮರ್ಪಿಸಿದ್ದರು ಎಂದು ಸ್ಮರಿಸಿದ್ದಾರೆ.

ವಿವೇಕಾನಂದ ಕೇಂದ್ರದ ಆರಂಭಿಕ ಜೀವನವ್ರತಿಗಳಲ್ಲಿ ಒಬ್ಬರಾಗಿದ್ದ ಅವರು ದೇಶಾದ್ಯಂತ ನಿರಂತರವಾಗಿ ಸೇವೆ ಸಲ್ಲಿಸಿದ್ದರು. ವಿಶೇಷವಾಗಿ ಈಶಾನ್ಯ ಭಾರತದೊಂದಿಗೆ ಅವರಿಗೆ ಆಳವಾದ ನಂಟಿತ್ತು. ಶಿಕ್ಷಣ, ಸಾಮಾಜಿಕ ಸೇವೆ ಹಾಗೂ ರಾಷ್ಟ್ರ ನಿರ್ಮಾಣದ ಕಾರ್ಯಗಳಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದರು ಎಂದು ಪ್ರಧಾನಿ ಹೇಳಿದ್ದಾರೆ.

ವಿವೇಕಾನಂದ ಕೇಂದ್ರದ ಕುಟುಂಬ ಹಾಗೂ ಅವರ ಅಭಿಮಾನಿಗಳಿಗೆ ಹೃತ್ಪೂರ್ವಕ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, “ಓಂ ಶಾಂತಿ” ಎಂದು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande