ವಿಶ್ವಕರ್ಮ ಜಯಂತಿ ನಿಮಿತ್ತ ಪೂರ್ವಭಾವಿ ಸಭೆ
ಗದಗ, 27 ಆಗಸ್ಟ್ (ಹಿ.ಸ.) ಆ್ಯಂಕರ್:- ಸೆಪ್ಟೆಂಬರ್ 17ರಂದು ಜರುಗಲಿರುವ ವಿಶ್ವಕರ್ಮ ಜಯಂತಿಯನ್ನು ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ಅವರು ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ
ಫೋಟೋ


ಗದಗ, 27 ಆಗಸ್ಟ್ (ಹಿ.ಸ.)

ಆ್ಯಂಕರ್:- ಸೆಪ್ಟೆಂಬರ್ 17ರಂದು ಜರುಗಲಿರುವ ವಿಶ್ವಕರ್ಮ ಜಯಂತಿಯನ್ನು ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ಅವರು ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶ್ವಕರ್ಮ ಜಯಂತಿ ನಿಮಿತ್ತ ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು

ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಿಸಿ, ಗಣ್ಯರಿಗೆ ಆಹ್ವಾನ ನೀಡಲು ಕ್ರಮ ವಹಿಸಬೇಕು. ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವುದರ ಜೊತೆಗೆ ಶಾಲಾ-ಕಾಲೇಜುಗಳು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ವಿಶ್ವಕರ್ಮ ಜಯಂತಿ ಆಚರಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ವಿಶ್ವಕರ್ಮರ ಜೀವನ, ಸಾಧನೆ ಹಾಗೂ ಸಮಾಜಕ್ಕೆ ನೀಡಿದ ಕೊಡುಗೆ ಕುರಿತು ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮಾಜದ ಪ್ರತಿಭಾವಂತರು ಹಾಗೂ ಹಿರಿಯರನ್ನು ಗುರುತಿಸಿ ಸನ್ಮಾನಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಹೇಳಿದರು.

ಜಯಂತಿ ಕಾರ್ಯಕ್ರಮದ ಅಂಗವಾಗಿ ವೇದಿಕೆ, ಆಸನ, ಕುಡಿಯುವ ನೀರು, ಊಟೋಪಹಾರ ಸೇರಿದಂತೆ ಅಗತ್ಯ ಮೂಲಸೌಕರ್ಯಗಳ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಕೈಗೊಳ್ಳಬೇಕು. ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಲೋಪವಾಗದಂತೆ ಸಂಬಂಧಿಸಿದ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ನಿರ್ದೇಶನ ನೀಡಿದರು.

ಇದೇ ಸಂದರ್ಭದಲ್ಲಿ ವಿಶ್ವಕರ್ಮರ ಕುರಿತು ಉಪನ್ಯಾಸ, ಪುಸ್ತಕ ಬಿಡುಗಡೆ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಆಯೋಜನೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಸವರಾಜ ವಿ. ಬಳ್ಳಾರಿ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande