
ಬೆಂಗಳೂರು, 27 ಆಗಸ್ಟ್ (ಹಿ.ಸ.):
ಆ್ಯಂಕರ್:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರೂಪಿಸಲಾದ ನೂತನ ‘ಜಲ ಆಸ್ತಿ’ ವೆಬ್ ಅಪ್ಲಿಕೇಶನ್‌ಗೆ ಬೆಂಗಳೂರಿನ ವಿಧಾನಸೌಧದಲ್ಲಿ ಸಚಿವ ಈಶ್ವರ ಖಂಡ್ರೆ ಅವರು ಇಂದು ಚಾಲನೆ ನೀಡಿದರು.
ಇಲಾಖೆಯ ವ್ಯಾಪ್ತಿಯಲ್ಲಿರುವ ಜಲ ಆಸ್ತಿಗಳ ಸಮಗ್ರ ಮಾಹಿತಿಯನ್ನು ದಾಖಲಿಸುವುದು, ಅವುಗಳ ನಿರ್ವಹಣೆ ಹಾಗೂ ಮೇಲ್ವಿಚಾರಣೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಕೈಗೊಳ್ಳಲು ಈ ತಂತ್ರಾಂಶ ಸಹಕಾರಿಯಾಗಲಿದೆ ಎಂದು ಸಚಿವರು ತಿಳಿಸಿದರು.
ತಂತ್ರಜ್ಞಾನದ ಸದ್ಬಳಕೆಯ ಮೂಲಕ ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯವೈಖರಿಯನ್ನು ಮತ್ತಷ್ಟು ಪಾರದರ್ಶಕ, ಪರಿಣಾಮಕಾರಿ ಹಾಗೂ ಜನಸ್ನೇಹಿಯಾಗಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ಸಮೀರ್ ಶುಕ್ಲಾ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಯುಕ್ತೆ ಫೌಜಿಯಾ ತರನ್ನುಮ್ ಬಿ. ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.