ಗಿರಿ ಜನ ಉಪಯೋಜನೆ : ಜಾನಪದ ತಿಂಗಳ ತರಬೇತಿ : ಅರ್ಜಿ ಆಹ್ವಾನ
ಬಳ್ಳಾರಿ, 27 ಆಗಸ್ಟ್ (ಹಿ.ಸ.) ಆ್ಯಂಕರ್ : ಕರ್ನಾಟಕ ಜಾನಪದ ಅಕಾಡೆಮಿಯು ಸರ್ಕಾರದ ಸಹಯೋಗದೊಂದಿಗೆ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಜಾನಪದ ತಿಂಗಳ ವಿಶೇಷ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ರಾಜ್ಯದ 4 ವಿಭಾಗಗಳಲ್ಲಿ ಈ
ಗಿರಿ ಜನ ಉಪಯೋಜನೆ : ಜಾನಪದ ತಿಂಗಳ ತರಬೇತಿ : ಅರ್ಜಿ ಆಹ್ವಾನ


ಬಳ್ಳಾರಿ, 27 ಆಗಸ್ಟ್ (ಹಿ.ಸ.)

ಆ್ಯಂಕರ್ : ಕರ್ನಾಟಕ ಜಾನಪದ ಅಕಾಡೆಮಿಯು ಸರ್ಕಾರದ ಸಹಯೋಗದೊಂದಿಗೆ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಜಾನಪದ ತಿಂಗಳ ವಿಶೇಷ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ರಾಜ್ಯದ 4 ವಿಭಾಗಗಳಲ್ಲಿ ಈ ತರಬೇತಿ ನಡೆಯಲಿದ್ದು, ಜಾನಪದ ಕಲಾವಿದರು, ವಿದ್ವಾಂಸರು, ಸಾಹಿತಿಗಳು ಹಾಗೂ ಬರಹಗಾರರ ಮೂಲಕ ತರಬೇತಿ ನೀಡಲಾಗುತ್ತದೆ.

ಅರ್ಹತೆ ಮತ್ತು ವಿವರಗಳು:

16 ರಿಂದ 40 ವರ್ಷದೊಳಗಿನ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 16-09-2026. ಅರ್ಜಿ ನಮೂನೆಯನ್ನು ಅಕಾಡೆಮಿಯ ಅಧಿಕೃತ ವೆಬ್ಸೈಟ್ https://janapada.karnataka.gov.in/ ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಈ ಕೆಳಗಿನ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಸಲ್ಲಿಸಬೇಕು:

ವಿಳಾಸ: ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು – 560002. ಹೆಚ್ಚಿನ ಮಾಹಿತಿಗಾಗಿ ದೂ.080-22215509 ಗೆ ಸಂಪರ್ಕಿಸಬಹುದು. ಅಭ್ಯರ್ಥಿಗಳ ಆಯ್ಕೆಯಲ್ಲಿ ಅಕಾಡೆಮಿಯ ನಿರ್ಧಾರವೇ ಅಂತಿಮವಾಗಿರುತ್ತದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಎನ್. ನಮ್ರತ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande