ನೇಪಾಳ ದುರಂತಕ್ಕೆ ವಿಎಚ್ಪಿ ಸಂತಾಪ; ಸಂತ್ರಸ್ತರಿಗೆ ನೆರವಿನ ಘೋಷಣೆ
ನವದೆಹಲಿ, 27 ಆಗಸ್ಟ್ (ಹಿ.ಸ.): ಆ್ಯಂಕರ್:ನೇಪಾಳದ ಉತ್ತರ ಗಡಿ ಪ್ರದೇಶಗಳಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹಕ್ಕೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಸಂತ್ರಸ್ತರಿಗೆ ನೆರವು ನೀಡುವುದಾಗಿ ಘೋಷಿಸಿದೆ. ಟಿಬೆಟ್ ಗಡಿಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ರಸುವಾ ಜ
नेपाल का बाढ़ प्रभावित क्षेत्र।


ನವದೆಹಲಿ, 27 ಆಗಸ್ಟ್ (ಹಿ.ಸ.):

ಆ್ಯಂಕರ್:ನೇಪಾಳದ ಉತ್ತರ ಗಡಿ ಪ್ರದೇಶಗಳಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹಕ್ಕೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಸಂತ್ರಸ್ತರಿಗೆ ನೆರವು ನೀಡುವುದಾಗಿ ಘೋಷಿಸಿದೆ.

ಟಿಬೆಟ್ ಗಡಿಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ರಸುವಾ ಜಿಲ್ಲೆಯ ಭೋಟೇಕೋಶಿ ನದಿಯಲ್ಲಿ ಭೀಕರ ಪ್ರವಾಹ ಉಂಟಾಗಿ ಅಪಾರ ಜೀವಹಾನಿ ಹಾಗೂ ಆಸ್ತಿ-ಪಾಸ್ತಿ ನಷ್ಟ ಸಂಭವಿಸಿರುವುದಕ್ಕೆ ವಿಎಚ್‌ಪಿ ದುಃಖ ವ್ಯಕ್ತಪಡಿಸಿದೆ. ಸಂಕಷ್ಟದ ಈ ಸಂದರ್ಭದಲ್ಲಿ ನೇಪಾಳಿ ಸಮಾಜ, ಸಂತ್ರಸ್ತ ಕುಟುಂಬಗಳು ಹಾಗೂ ಬಾಧಿತ ಜನರೊಂದಿಗೆ ಪರಿಷತ್ ಮತ್ತು ಹಿಂದೂ ಸಮಾಜ ನಿಂತಿದೆ ಎಂದು ತಿಳಿಸಿದೆ.

ಕೈಲಾಸ ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಯಾತ್ರಿಕರ ಜೀವಕ್ಕೂ ಅಪಾಯ ಎದುರಾಗಿರುವ ಬಗ್ಗೆ ಪರಿಷತ್ ಆತಂಕ ವ್ಯಕ್ತಪಡಿಸಿದೆ.

ಕೇಂದ್ರ ಸರ್ಕಾರ ನೀಡುತ್ತಿರುವ ವಿವಿಧ ನೆರವಿನ ಜೊತೆಗೆ ಭಾರತೀಯ ಸಮಾಜದ ವತಿಯಿಂದಲೂ ಪರಿಹಾರ ಸಾಮಗ್ರಿ ಹಾಗೂ ಆರ್ಥಿಕ ನೆರವು ಸಂಗ್ರಹಿಸಿ ಸಂತ್ರಸ್ತರಿಗೆ ತಲುಪಿಸಲಾಗುವುದು ಎಂದು ವಿಎಚ್‌ಪಿ ತಿಳಿಸಿದೆ.

ನೇಪಾಳದ ರಸುವಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬುಧವಾರ ಬೆಳಗ್ಗೆ ಭೋಟೇಕೋಶಿ ನದಿಯಲ್ಲಿ ಏಕಾಏಕಿ ಉಂಟಾದ ಭೀಕರ ಪ್ರವಾಹದಲ್ಲಿ ಈವರೆಗೆ ಕನಿಷ್ಠ 157 ಮಂದಿ ಮೃತಪಟ್ಟಿದ್ದು, ಸುಮಾರು 700 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande