
ಬೆಂಗಳೂರು, 27 ಆಗಸ್ಟ್ (ಹಿ.ಸ.):
ಆ್ಯಂಕರ್:
ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಸಂತೋಷ್ ಎಸ್ ಲಾಡ್ ಅವರು ಇಂದು ವಿಕಾಸಸೌಧದಲ್ಲಿ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು.
ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಸಂಪುಟದಲ್ಲಿ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವರಾದ ನಂತರ ಇದೇ ಮೊದಲ ಬಾರಿಗೆ ಅಧಿಕಾರಿಗಳ ಸಭೆ ನಡೆಸಿದರು.
ಇಲಾಖೆಯ ಕಾರ್ಯಯೋಜನೆಗಳು, ಕಾರ್ಮಿಕರ ಕಲ್ಯಾಣಕ್ಕಾಗಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಅಧಿಕಾರಿಗಳ ಜೊತೆ ಸಮಗ್ರ ಚರ್ಚೆ ನಡೆಸಿದರು.
ಈ ಸಭೆಯಲ್ಲಿ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಸಲ್ಮಾ ಫಾಹಿಂ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿ ಚೆನ್ನಣ್ಣನವರ್, ಕಾರ್ಮಿಕ ಆಯುಕ್ತರಾದ ರಾಗಪ್ರಿಯ, ಇಎಸ್ಐ ಆಯುಕ್ತರಾದ ದಿನೇಶ್ ಕುಮಾರ್, ಅಪರ ಕಾರ್ಮಿಕ ಆಯುಕ್ತ ಡಾ.ಮಂಜುನಾಥ್, ಜಂಟಿ ಕಾರ್ಮಿಕ ಆಯುಕ್ತ ರವಿಕುಮಾರ್, ಜಂಟಿ ಕಾರ್ಮಿಕ ಆಯುಕ್ತ ಹಾಗೂ ಜಂಟಿ ಕಾರ್ಯದರ್ಶಿ ಉಮೇಶ್, ಉಪ ಕಾರ್ಮಿಕ ಆಯುಕ್ತ ಗುರುಪ್ರಸಾದ್, ಕಾರ್ಮಿಕ ಕಲ್ಯಾಣ ಆಯುಕ್ತ ಆಂಜನೇಯ, ಕಾರ್ಖಾನೆಗಳು ಮತ್ತು ಬಾಯ್ಲರುಗಳ ಇಲಾಖೆಯ ನಿರ್ದೇಶಕರಾದ ನಂಜಪ್ಪ ಹಾಗೂ ಇಲಾಖೆ ಸೇರಿದಂತೆ ಇಲಾಖೆಯಡಿ ಬರುವ ಎಲ್ಲ ಮಂಡಳಿಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.